ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು
ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಮಾರನಹಾಡಿ ಬಳಿ ನಡೆದಿದೆ.
ಮಾರನಹಾಡಿಯಿಂದ 2 ಕಿಲೋ ಮೀಟರ್ ದೂರದಲ್ಲಿರುವ ಆಡುಕುಪ್ಪೆ ಕೆರೆ ಬಳಿ ಈ ಘಟನೆ ನಡೆದಿದೆ.
ಸೌದೆ ತರಲೆಂದು 15 ಮಂದಿ ಮಹಿಳೆಯರು ಕೆರೆ ಹತ್ತಿರ ತೆರಳಿದ್ದರು. ಈ ವೇಳೆ ಕಾಡಾನೆಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ಮಹಿಳೆ ಜ್ಯೋತಿ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಕಾಡಾನೆ ದಾಳಿ ನಡೆಸುತ್ತಿದ್ದಂತೆ ಮಹಿಳೆಯರು ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.
ಕಾಲಿನಿಂದ ತುಳಿದು ನಂತರ ಕೊಂಬಿನಿಂದ ಬಲವಾಗಿ ಹೊಟ್ಟೆಯ ಪಕ್ಕೆಲುಬಿಗೆ ತಿವಿದಿರುವುದರಿಂದ ಹೊಟ್ಟೆಯ ಪಕ್ಕೆಲುಬಿನಲ್ಲಿ ರಂಧ್ರವಾಗಿದೆ. ಮಹಿಳೆ ಜ್ಯೋತಿಗೆ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…