ಸರಗೂರು: ಜಮೀನಿನಲ್ಲಿ ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದ ಇಬ್ಬರು ರೈತರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ತಾಲ್ಲೂಕಿನ ಹಲಸೂರು ಗ್ರಾಮದ ಪರಶಿವನಾಯಕ, ಇವರ ಚಿಕ್ಕಪ್ಪ ಶಿವಣ್ಣ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಇವರಿಬ್ಬರೂ ಸರಗೂರು ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪರಶಿವನಾಯಕ ಮತ್ತು ಶಿವಣ್ಣ ಇಬ್ಬರೂ ಹಲಸೂರು ಗ್ರಾಮದ ಚಾಮನಾಯಕ ಎಂಬವರ ಜಮೀನಿನಲ್ಲಿ ಉಳುಮೆ ಮಾಡಲು ಟ್ರಾಕ್ಟರ್‌ನಲ್ಲಿ ಬೆಳಿಗ್ಗೆ ೭ ಗಂಟೆಯ ಸಮಯದಲ್ಲಿ ತೆರಳಿದ್ದರು. ಜಮೀನಿನಲ್ಲಿ ಉಳುಮೆ ಮಾಡುವಾಗ ಗ್ರಾಮದ ಸಮೀಪದಲ್ಲಿರುವ ನುಗು ವನ್ಯಜೀವಿ ವಲಯದಿಂದ ಸರಗೂರು ವಲಯದ ಅಂಚಿನ ಹಲಸೂರು ಗುಡ್ಡದಿಂದ ಬಂದ ಒಂಟಿಸಲಗವೊಂದು ಟ್ರಾಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದೆ.
ಈ ವೇಳೆ ಟ್ರಾಕ್ಟರ್‌ನಲ್ಲಿದ್ದ ಪರಶಿವನಾಯಕ ಅವರ ಕಣ್ಣಿನ ಭಾಗಕ್ಕೆ ಆನೆ ದಂತದಿಂದ ಏಟು ಬಿದ್ದಿದ್ದು, ಶಿವಣ್ಣ ಅವರಿಗೂ ಗಂಭೀರ ಗಾಯಗಳಾಗಿವೆ. ವಿಷಯ ತಿಳಿದು ಕೂಡಲೇ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಆಸ್ಪತ್ರೆಗೆ ಅಧಿಕಾರಿಗಳ ಭೇಟಿ: ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ನುಗು ವನ್ಯಜೀವಿ ವಲಯ ಆರ್‌ಎಫ್‌ಒ ವಿವೇಕ್ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಅರಣ್ಯ ಇಲಾಖೆಯಿಂದ ಭರಿಸಲಾಗುವುದು. ಕಾಡಾನೆಯನ್ನು ಅರಣ್ಯಕ್ಕೆ ಓಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…