ಮೈಸೂರು

ಸರಗೂರು| ಕಾಡಾನೆ ದಾಳಿ: ಇಬ್ಬರು ರೈತರಿಗೆ ಗಂಭೀರ ಗಾಯ

ಸರಗೂರು: ಜಮೀನಿನಲ್ಲಿ ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದ ಇಬ್ಬರು ರೈತರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ತಾಲ್ಲೂಕಿನ ಹಲಸೂರು ಗ್ರಾಮದ ಪರಶಿವನಾಯಕ, ಇವರ ಚಿಕ್ಕಪ್ಪ ಶಿವಣ್ಣ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಇವರಿಬ್ಬರೂ ಸರಗೂರು ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪರಶಿವನಾಯಕ ಮತ್ತು ಶಿವಣ್ಣ ಇಬ್ಬರೂ ಹಲಸೂರು ಗ್ರಾಮದ ಚಾಮನಾಯಕ ಎಂಬವರ ಜಮೀನಿನಲ್ಲಿ ಉಳುಮೆ ಮಾಡಲು ಟ್ರಾಕ್ಟರ್‌ನಲ್ಲಿ ಬೆಳಿಗ್ಗೆ ೭ ಗಂಟೆಯ ಸಮಯದಲ್ಲಿ ತೆರಳಿದ್ದರು. ಜಮೀನಿನಲ್ಲಿ ಉಳುಮೆ ಮಾಡುವಾಗ ಗ್ರಾಮದ ಸಮೀಪದಲ್ಲಿರುವ ನುಗು ವನ್ಯಜೀವಿ ವಲಯದಿಂದ ಸರಗೂರು ವಲಯದ ಅಂಚಿನ ಹಲಸೂರು ಗುಡ್ಡದಿಂದ ಬಂದ ಒಂಟಿಸಲಗವೊಂದು ಟ್ರಾಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದೆ.

ಈ ವೇಳೆ ಟ್ರಾಕ್ಟರ್‌ನಲ್ಲಿದ್ದ ಪರಶಿವನಾಯಕ ಅವರ ಕಣ್ಣಿನ ಭಾಗಕ್ಕೆ ಆನೆ ದಂತದಿಂದ ಏಟು ಬಿದ್ದಿದ್ದು, ಶಿವಣ್ಣ ಅವರಿಗೂ ಗಂಭೀರ ಗಾಯಗಳಾಗಿವೆ. ವಿಷಯ ತಿಳಿದು ಕೂಡಲೇ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಆಸ್ಪತ್ರೆಗೆ ಅಧಿಕಾರಿಗಳ ಭೇಟಿ: ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ನುಗು ವನ್ಯಜೀವಿ ವಲಯ ಆರ್‌ಎಫ್‌ಒ ವಿವೇಕ್ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಅರಣ್ಯ ಇಲಾಖೆಯಿಂದ ಭರಿಸಲಾಗುವುದು. ಕಾಡಾನೆಯನ್ನು ಅರಣ್ಯಕ್ಕೆ ಓಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

7 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

8 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

9 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

12 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

12 hours ago