ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ ತಮ್ಮ ಪ್ರಾಣವನ್ನೂ ಉಳಿಸಿಕೊಳ್ಳಬೇಕಾಗಿ ಪರಿಸ್ಥಿತಿ ರೈತರಿಗೆ ಎದುರಾಗಿದೆ.
ತಾಲ್ಲೂಕಿನ ಬಳ್ಳೂರು ಹುಂಡಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯಲ್ಲಿ ಕಾಣಿಸಿಕೊಂಡ ಐದು ಆನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ಎಬ್ಬಿಸಿವೆ.
ಕಾಡಾನೆಗಳು ಜಮೀನುಗಳಿಗೆ ನುಗ್ಗಿ ಕಬ್ಬು, ಬಾಳೆ ಮತ್ತು ಇತರ ಬೆಳೆಗಳನ್ನು ನಾಶಪಡಿಸುತ್ತಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಬಳ್ಳೂರುಹುಂಡಿಯ ಬಸವರಾಜು ಮತ್ತು ಮರಿಸ್ವಾಮಿ ಅವರ ಜಮೀನಿನಲ್ಲಿ ಬಾಳೆ, ಕುಂಬಳಕಾಯಿ ಬೆಳೆಯನ್ನು ಹಾನಿ ಮಾಡಿ ಅಪಾರ ನಷ್ಟವನ್ನು ಉಂಟುಮಾಡಿದ್ದವು. ಇದರಿಂದ ರೈತರು ಕಂಗಾಲಾಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಈನಡುವೆ, ಇಂದು ಅರಣ್ಯ ಸಿಬ್ಬಂದಿಗಳ ವಾಹನವನ್ನು ಅಡ್ಡಗಟ್ಟಿದ ಸಂತ್ರಸ್ಥ ರೈತ ಆನೆಗಳ ಹಾವಳಿ ತಪ್ಪಿಸುವಂತೆ ಗೋಳಾಡಿದ್ದಾರೆ. ರಾತ್ರಿಯ ವೇಳೆ ಕಾಡಂಚಿನಲ್ಲಿ ಗೇಟ್‌ಗಳು ಹಾಕದೆ ಇರುವುದರಿಂದಲೇ ಆನೆಗಳು ಗ್ರಾಮಕ್ಕೆ ಬರುತ್ತಿವೆ. ಈ ಬಗ್ಗೆ ಅರಣ್ಯ ಸಿಬ್ಬಂದಿಗಳಿಗೆ ಎಷ್ಟೇ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇಂದಿನ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿಯೇ ಕಾರಣ ಎಂದು ದೂಷಿಸಿದ್ದಾರೆ.
ಸದ್ಯ ಆನೆಗಳು ಜನರನ್ನು ಅಟ್ಟಾಡಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…
ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…
ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…
ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…
ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…
ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…