ಎಚ್.ಡಿ.ಕೋಟೆ: ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದ್ದವು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಬಂದಿದ್ದ ಎರಡು ಕಾಡಾನೆಗಳು ಕಬಿನಿ ಹಿನ್ನೀರು ಪ್ರದೇಶದಲ್ಲಿ ಸಂಚಾರ ಮಾಡಿವೆ. ಆನೆಗಳನ್ನು ಕಂಡ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ನಾಗರಹೊಳೆ ಅರಣ್ಯದ ಕಡೆಗೆ ಓಡಿಸಿದ್ದಾರೆ. ಬಳಿಕ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.





