ಮೈಸೂರು: ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಅವರು ರಾಜೀನಾಮೆ ಕೊಡುತ್ತಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಮಡ್ ಮೂಲಕ ನಿರ್ಮಾಲಾ ಸೀತಾರಾಮನ್ ಸುಲಿಗೆ ಮಾಡಿದ್ದಾರೆ. ಅವರು ವಿರುದ್ಧವೂ ಎಫ್‌ಐಆರ್ ಆಗಿದೆ. ಅವರು ರಾಜೀನಾಮೆ ಕೊಡ್ತಾರಾ? ಎಂದು ಕೇಳಿದರು.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ. ಹಾಗಿದ್ದರೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ, ಜತೆಗೆ ಕುಮಾರಸ್ವಾಮಿ ನಿರ್ಮಾಲಾ ಸೀತಾರಾಮನ್ ಅವರನ್ನು ಇಳಿಸಲಿ, ನಂತರ ನನಗೆ ಕೇಳಲಿ. ಚುನಾವಣಾ ಬಾಂಡ್ ದುರುಪಯೋಗ ಮಾಡಿರುವುದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.