ಮೈಸೂರು

ಪಕ್ಷಕ್ಕೂ ದ್ರೋಹ ಮಾಡುವುದಿಲ್ಲ ಪಕ್ಕದವರಿಗೂ ದ್ರೋಹ ಮಾಡುವುದಿಲ್ಲ : ಪ್ರತಾಪ್‌ ಸಿಂಹ

ಮೈಸೂರು : ಬಿಜೆಪಿ ಪಕ್ಷ  ನನ್ನ ತಾಯಿ ಇದ್ದಂತ್ತೆ. ಯಾವುದೇ ಕಾರಣಕ್ಕೂ ಪಕ್ಷಕ್ಕಾಗಲಿ ಪಕ್ಕದವರಿಗಾಗಲಿ ದ್ರೋಹ ಮಾಡುವ ಮಾತೇ ಇಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ಸಂಸದ್‌ ಪ್ರತಾಪ್‌ ಸಿಂಹ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಜಂಟಿ ಮಾಧ್ಯಮ ಸಂವಾದ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಟಿಬದ್ಧ ಸೈನಿಕ. ಎಂದಿಗೂ ಪಕ್ಷಕ್ಕೆ ದ್ರೋಹ ಮಾಡುವ ಮಾತೇ ಬರುವುದಿಲ್ಲ ಎಂದರು.

ಮಹಾರಾಜರಾಗಿ ಯದುವೀರ್‌ ನಾಡಿಗೆ ಪರಿಚಿತರಾದವರು. ಬಿಜೆಪಿ ಅಭ್ಯರ್ಥಿಯಾಗಿ ಜನಕ್ಕೆ ಪರಿಚಿತರಾಗಬೇಕು. ಅವರ ಚಿಂತನೆ, ಆಲೋಚನೆ, ಈ ಕ್ಷೇತ್ರದ ಬಗ್ಗೆ ಇಟ್ಟುಕೊಂಡಿರುವ ಕನಸಿನ ಬಗ್ಗೆ ಜನರಿಗೆ ತಿಳಿಸಬೇಕಿದೆ ಮತ್ತು ಜನರ ಆಶಿರ್ವಾದವನ್ನು ಪಡೆಯಬೇಕಿದೆ ಎಂದು ತಿಳಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿ ದೊಡ್ಡದಾಗಿದೆ. ಹೀಗಾಗಿ ಸುಲಭಕ್ಕೆ ಮತದಾರರನ್ನುತಲುಪುವ ಏಕ ಮಾತ್ರ ಮಾರ್ಗ ಎಂದರೆ ಮಾಧ್ಯಮ ಹೀಗಾಗಿ ಮಾಧ್ಯಮದವರ ಸಹಕಾರ ತುಂಬಾ ಮುಖ್ಯವಾಗಿದೆ ಎಂದರು.

ನಮ್ಮ ಮಧ್ಯೆ ಯಾವುದೇ ಒಡಕು ಮೂಡಿಲ್ಲ: ಲೋಕಸಭಾ ಚುನಾವಣೆಗೆ ಪಕ್ಷ ಎದುವೀರ್‌ ಅವರನ್ನು ಆಯ್ಕೆ ಮಾಡಿದ ಕೂಡಲೆ ಅವರಿಗೆ ನಾನೇ ಕರೆ ಮಾಡಿ ನನ್ನ ಸಹಕರ ಹಾಗೂ ಬೆಂಬಲವನ್ನು ತಿಳಿಸಿದ್ದೇನೆ. ಹೀಗಾಗಿ ನಮ್ಮ ಮಧ್ಯೆ ಯಾವುದೇ ಬಿರುಕಾಗಲಿ, ಬೇಸರವಾಗಲಿ ಇಲ್ಲ ಎಂದು ಪ್ರತಾಪ್‌ ಸಿಂಹ, ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದರು.

ಶಾಸಕ ಶ್ರೀವತ್ಸ, ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌, ಮಾಜಿ ಶಾಸಕ, ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ, ಮಾಜಿ ಶಾಸಕ ಎಸ್‌.ಎ.ರಾಮದಾಸ್‌, ಬಿಜೆಪಿ ವಕ್ತಾರೆ ಮಾಳ್ವಿಕ ಅವಿನಾಶ್‌ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು.

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

7 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

8 hours ago