ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ ನಡೆದಿದೆ.
ತಾಲ್ಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಎಂಬುವವರ ಪತ್ನಿ ಅಶ್ವಿನಿ ಎಂಬುವವರೇ ಮೃತ ದುರ್ದೈವಿ. ಜೀವನ್ ಅವರು ಪತ್ನಿ ಹಾಗೂ ಮಗುವಿನೊಂದಿಗೆ ಬೈಕ್‌ನಲ್ಲಿ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಕೆಆರ್‌ಎಸ್‌ಟಿಸಿ ಬಸ್ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಅಶ್ವಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜೀವನ್ ಹಾಗೂ ಮಗುವಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





