ಮೈಸೂರು

ಮಹಿಳೆಯರ ಮೇಲೆ ಮಚ್ಚಿನಿಂದ ಹಲ್ಲೆ

ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ ನಡೆದಿದೆ.

ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರು ಯಾರು, ಹಲ್ಲೆ ನಡೆಸಿರುವವರು ಯಾರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶುಕ್ರವಾರ ರಾತ್ರಿ 8:45 ರಿಂದ 9 ಗಂಟೆ ನಡುವೆ ಕಪ್ಪು ಕಾರಿನಲ್ಲಿ ಮೂವರ ಯುವಕರ ಗುಂಪು ಬಂದಿದೆ. ರಾಮಾನುಜ ರಸ್ತೆಯ 12ನೇ ತಿರುವಿನ ಬಳಿ ರಸ್ತೆಯಲ್ಲಿ ಬರುತಿದ್ದ ಆಟೋಗೆ ಕಾರನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆನಂತರ ಕಾರಿನಿಂದ ಇಳಿದ ಮೂವರು ವ್ಯಕ್ತಿಗಳು ಮಾರಾಕಾಸ್ತ್ರಗಳನ್ನು ಹಿಡಿದು ಆಟೋ ಒಳಗಿದ್ದ ಮಹಿಳೆಯರ ಮೇಲೆ ಮಚ್ಚುಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಆಟೋದಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸುತ್ತಾ, ನಿಮ್ಮನ್ನು ಕತ್ತರಿಸದೇ ಬಿಡುವುದಿಲ್ಲ ಎಂದು ಕೂಗುತ್ತಾ ಕಾರನ್ನು ಏರಿ ಸ್ಥಳದಿಂದ ಪರಾರಿಯಾಗಿದ್ದಾರೆ.

ನೂರಾರು ಜನರು ಹಾಗೂ ವಾಹನಗಳು ಓಡಾಡುವ ರಾಮಾನುಜ ರಸ್ತೆಯಂತ ಪ್ರಮುಖ ಸ್ಥಳದಲ್ಲಿ ಈ ಘಟನೆ ನಡೆದಿರುವುದರಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಐವತ್ತಕ್ಕು ಹೆಚ್ಚು ಮಂದಿ ಸಾರ್ವಜನಿಕರು ಅಸಹಾಯಕರಾಗಿ ಘಟನೆಯನ್ನು ನೋಡುತ್ತಾ ನಿಂತಿದುದು ಕಂಡು ಬಂದಿದೆ. ಸಾರ್ವಜನಿಕರು ಕೆ.ಆರ್‌ ಪೊಲೀಸ್‌ ಠಾಣೆಯ ಅಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಕೆ.ಆರ್‌ ಠಾಣಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಘಟನೆಗೆ ಕಾರಣರಾದವರ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನಲಾಗಿದೆ. ಆದರೆ ಯಾವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬುದು ಪೊಲಿಸರಿಗೆ ಗೊತ್ತಾಗಿಲ್ಲ. ಈ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಕೌಟುಂಬಿಕ ಕಲಹ,,,?
ಪೊಲೀಸರು ಹೇಳುವಂತೆ ಘಟನೆಯು ಕೌಟುಂಬಿಕ ಕಲಹವಾಗಿದೆ. ನಗರದ ಚಾಮರಾಜ ಮೊಹಲ್ಲಾ ನಿವಾಸಿ ಯುವತಿಯು ಕೆಲ ದಿನಗಳ‌ ಹಿಂದೆ ತಾನು ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ತೆರಳಿದ್ದಳು ಎನ್ನಲಾಗಿದೆ. ಆಕೆ‌ ಗುರುವಾದ ರಾತ್ರಿ‌ ಆಟೋ ಮೂಲಕ ಬರುವ ವಿಚಾರ ತಿಳಿದ ಸಂಬಂದಿಗಳು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

5 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

5 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

5 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

5 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

7 hours ago