Mysore
29
scattered clouds

Social Media

ಭಾನುವಾರ, 09 ಫೆಬ್ರವರಿ 2025
Light
Dark

ಮೈಸೂರು: ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

ಮೈಸೂರು: ಮೈಕ್ರೋ ಫೈನಾನ್ಸ್‌ನಲ್ಲಿ ಮಾಡಿದ್ದ ಸಾಲಕ್ಕೆ ಹೆದರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.

ಜಯಶೀಲಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಇವರು ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ.

ಪ್ರತಿ ತಿಂಗಳು ಜಯಶೀಲಾ ಅವರು 20,000 ಇಎಂಐ ಕಟ್ಟಬೇಕಿತ್ತು. ಆದರೆ ಇತ್ತೀಚೆಗೆ ಹಸುಗಳು ಕೂಡ ಅನಾರೋಗ್ಯದಿಂದ ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಬೇಸತ್ತ ಜಯಶೀಲಾ ವಿಷದ ಮಾತ್ರೆಗಳನ್ನು ನುಂಗಿ ತಮ್ಮ ಜಮೀನಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಂತರವೇ ಹೆಚ್ಚಿನ ಸತ್ಯಾಸತ್ಯತೆ ತಿಳಿದು ಬರಲಿದೆ.

Tags: