ಮೈಸೂರು: ಮೈಕ್ರೋ ಫೈನಾನ್ಸ್‌ನಲ್ಲಿ ಮಾಡಿದ್ದ ಸಾಲಕ್ಕೆ ಹೆದರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಜಯಶೀಲಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಇವರು ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ.
ಪ್ರತಿ ತಿಂಗಳು ಜಯಶೀಲಾ ಅವರು 20,000 ಇಎಂಐ ಕಟ್ಟಬೇಕಿತ್ತು. ಆದರೆ ಇತ್ತೀಚೆಗೆ ಹಸುಗಳು ಕೂಡ ಅನಾರೋಗ್ಯದಿಂದ ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಬೇಸತ್ತ ಜಯಶೀಲಾ ವಿಷದ ಮಾತ್ರೆಗಳನ್ನು ನುಂಗಿ ತಮ್ಮ ಜಮೀನಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಂತರವೇ ಹೆಚ್ಚಿನ ಸತ್ಯಾಸತ್ಯತೆ ತಿಳಿದು ಬರಲಿದೆ.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…