ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ
ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ ವಿ-ಸಖಿ ಸಂಸ್ಥೆ ವತಿಯಿಂದ ಭಾನುವಾರ ಅಯೋಜಿಸಿದ್ದ ಸೀರೆ ನಡಿಗೆ (ವಾಕಥಾನ್) ಕಾರ್ಯ ಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವಾಕಥಾನ್‌ನಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಗಮನ ಸೆಳೆದರು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಸ್ಥಾನದ ಮುಂಭಾಗದಿಂದ ಸುಮಾರು 300 ಮಹಿಳೆಯರು ವಾಕಥಾನ್ ನಡೆಸಿದರು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸೀರೆ ನಡಿಗೆ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸ್ತನ ಕ್ಯಾನ್ಸರ್ ಜಗತ್ತಿನ ಕಾಯಿಲೆಯಾಗಿ ಮಾರ್ಪಟ್ಟಿದೆ. ಅರಿವಿನ ಕೊರತೆಯಿಂದ ಹೆಚ್ಚು ಮಹಿಳೆಯರು ಸ್ತನ ಕ್ಯಾನ್ಸರ್‌ಗೆ ಒಳಗಾಗುತ್ತಿದ್ದಾರೆ. ಎಷ್ಟೋ ಜನ ಹೆಣ್ಣು ಮಕ್ಕಳು ಸಂಕೋಚದಿಂದ ಸ್ತನ ತಪಾಸಣೆ ಮಾಡಿಸಲು ಹಿಂದೇಟು ಹಾಕುತ್ತಾರೆ. ಅಲ್ಲದೆ, ಕಾಯಿಲೆ ಇದೆ ಎಂದು ತಿಳಿದಾಗ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಇದೀಗ ಆಧುನಿಕ ಚಿಕಿತ್ಸಾ ವ್ಯವಸ್ಥೆಗಳು ಬಂದಿದೆ. ಮಹಿಳೆಯರು ಯಾವುದೇ ರೀತಿ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.
ನಂತರ 40 ಮಹಿಳೆಯರಿಗೆ ಉಚಿತವಾಗಿ ಸ್ತನ ಕ್ಯಾನ್ಸರ್ ತಪಾಸಣೆಯನ್ನು ಮಾಡಲಾಯಿತು. ಅಲ್ಲದೆ, ಕ್ಯಾನ್ಸರ್‌ಗೆ ತುತ್ತಾಗಿರುವ ಮಹಿಳೆಯರಿಗೆ ವಿಗ್ ತಯಾರಿಸುವ ಸಲುವಾಗಿ 8 ಮಹಿಳೆಯರು ಕೇಶದಾನ ಮಾಡಿದರು. ರೋಟರಿ ಕ್ಲಬ್ ಅಧ್ಯಕ್ಷೆ ಎಲಿಜಬೆತ್ ಶಕುಂತಲಾ, ವಿ ಸಖಿ ಅಧ್ಯಕ್ಷೆ ಭಾನು ಆನಂದ್ ಮತ್ತಿತರರು ಭಾಗವಹಿಸಿದ್ದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…