Mysore
24
scattered clouds

Social Media

ಶನಿವಾರ, 17 ಜನವರಿ 2026
Light
Dark

ನಾಳೆಯಿಂದ ಚಾ.ಬೆಟ್ಟದಲ್ಲಿ ಕಾಮಗಾರಿ ಮತ್ತೆ ಆರಂಭ : ಬಿಗಿ ಪೊಲೀಸ್‌ ಭದ್ರತೆ

ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ ಮತ್ತೆ ಆರಂಭಿಸಲಾಗುತ್ತದೆ. ಸಂಘಟನೆಯೊಂದರ ಹೋರಾಟದಿಂದಾಗಿ ಶುಕ್ರವಾರ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಪ್ರಸಾದ ಯೋಜನೆಯ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಸೋಮವಾರ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರು ತಿಳಿಸಿದ್ದಾರೆ.

ಕೆಲವರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡ ಬಗ್ಗೆ ಪತ್ರಿಕ್ರಿಯೆ ನೀಡಿದ ಅವರು, ಶನಿವಾರವೇ ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಪೊಲೀಸರು ವಿವಿಧ ಕಾರ್ಯಕ್ರಮಗಳ ಒತ್ತಡದ ಕೆಲಸದಲ್ಲಿ ನಿರತರಾಗಿದ್ದ ಕಾರಣ ಕಾಮಗಾರಿ ಆರಂಭಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಆದರೆ, ಸೋಮವಾರ ಪೊಲೀಸರ ಭದ್ರತೆಯಲ್ಲಿ ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು. ಸದ್ಯ ಕೆಲವರು ಕಾಮಗಾರಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದವರೆಗೆ ಪೊಲೀಸ್ ಭದ್ರತೆಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಗುತ್ತಿಗೆದಾರರು ಕಾಮಗಾರಿಗೆ ಅವಶ್ಯವಿರುವ ಕಟ್ಟಡ ನಿರ್ಮಾಣ ವಸ್ತುಗಳನ್ನು ಚಾಮುಂಡಿಬೆಟ್ಟದಲ್ಲಿ ದಾಸ್ತಾನಿಟ್ಟಿದ್ದಾರೆ. ಸೋಮವಾರದಿಂದ ಅದನ್ನು ಬಳಸಿಕೊಂಡು ಕೆಲಸ ಆರಂಭಿಸಲಾಗುವುದು ಎಂದು ಹೇಳಿದರು.

 

Tags:
error: Content is protected !!