ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ.
ಶುಕ್ರವಾರ ನಗರದ ವಿದ್ಯಾರಣ್ಯಪುರಂನಲ್ಲಿರುವ ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕಾರ್ಮಿಕ ಕಾಯ್ದೆಗಳು ಮತ್ತು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನಿಷ್ಠ ವೇತನ ಪರಿಷ್ಕರಣೆಯು ಐದು ವರ್ಷಗಳ ಹಿಂದೆ ನಡೆದಿತ್ತು. 14 ಸಾವಿರ ರೂ.ಗಳನ್ನು ನಿಗಧಿಪಡಿಸಲಾಗಿದೆ. ಅದರಲ್ಲಿ ಜೀವನ ನಡೆಸಲು ಕಷ್ಟವೆಂದೂ ಹಲವು ಸಂಘಟನೆಗಳು ಹೇಳಿದ್ದವು. ಆದರೆ, ಸಂಘಟನೆ ಕೇಳಿದರೂ ಎಂದಾಕ್ಷಣ 35 ಸಾವಿರ ರೂ.ಗಳನ್ನು ನೀಡಲು ಸಾಧ್ಯವಿಲ್ಲ. ಇದೀಗ ವೈಜ್ಞಾನಿಕವಾಗಿ ನಿಗಧಿಪಡಿಸಿ, ಎಲ್ಲರಿಗೂ ಒಮ್ಮತವಾದ ಕನಿಷ್ಠ ವೇತನ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಟ್ಟು 20 ಸಾವಿರಕ್ಕೂ ಹೆಚ್ಚು ನೋಂದಾಯಿತ ಸಂಸ್ಥೆಗಳಿದ್ದು, ಒಟ್ಟು 65 ಲಕ್ಷ ಕಾರ್ಮಿಕರಿದ್ದಾರೆ. ಅವುಗಳಲ್ಲಿ ಅಸಂಘಟಿತ ವಲಯದಲ್ಲಿ 1.81 ಕೋಟಿ ಕಾರ್ಮಿಕರಿದ್ದಾರೆ. ಅಲ್ಲದೇ, 25 ಕಾರ್ಮಿಕ ಕಾಯ್ದೆಗಳನ್ನು ಕ್ರೋಢಿಕರಿಸಿ 4 ಕಾರ್ಮಿಕ ಸಂಹಿತೆಗಳು ಮುಂದಿನ ಆರ್ಥಿಕ ವರ್ಷದಿಂದ ಜಾರಿಗೆ ತರುವ ನಿರೀಕ್ಷೆಯಿದೆ. ಇದಕ್ಕಾಗಿ ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಕಾರ್ಮಿಕ ಇಲಾಖೆಗೆ 880 ಹುದ್ದೆಗಳನ್ನು ಮಂಜೂರಾಗಿವೆ. ಅದರಲ್ಲಿ 450 ಅಧಿಕಾರಿಗಳು ಅಷ್ಟೇ ಪ್ರಸ್ತುತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಇಲಾಖೆಯ ವ್ಯಾಪ್ತಿಯು ದೊಡ್ಡದಿದೆ ಎಂದು ತಿಳಿಸಿದರು.
1 ಸಾವಿರ ಕೋಟಿ ಕಾರ್ಮಿಕ ಸೆಸ್ ಸಂಗ್ರಹ
ವರ್ಷಕ್ಕೆ ಸರಾಸರಿ ಒಂದು ಸಾವಿರ ಕೋಟಿ ರೂ. ಕಾರ್ಮಿಕ ಸೆಸ್ ಸಂಗ್ರಹವಾಗುತ್ತಿದೆ. ರಾಜ್ಯದಲ್ಲಿ 38 ಲಕ್ಷ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿದ್ದಾರೆ. ಆದರೆ, ಲೇಬರ್ ವೆಲ್‌ಫೇರ್ ಬೋರ್ಡ್‌ನಿಂದ ಏಳು ಯೋಜನೆಗಳನ್ನು ಮಾತ್ರ ಜಾರಿಗೊಳಿಸಲಾಗಿದೆ. ಅದರಲ್ಲಿಯೇ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಅಲ್ಲದೇ, ಕಾರ್ಮಿಕ ಮಂಡಳಿಗೆ ಉದ್ಯೋಗದಾತರು ಪಾವತಿಸಬೇಕಾದ ಪಾಲನ್ನು ನಿಯಮಿತವಾಗಿ ಪಾವತಿಸಬೇಕು. ಕಳೆದ ವರ್ಷ 57 ಕೋಟಿ ರೂ.ಗಳನ್ನು ವೆಚ್ಚ ಮಾಡಿದ್ದು, 29 ಸಾವಿರ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಒದಗಿಸಿದ್ದೇವೆ ಎಂದರು.
ಇ-ಶ್ರಮ್ ಪೋರ್ಟಲ್ ನೋಂದಣಿ ಅಗತ್ಯ
ಅಸಂಘಟಿತ ವಲಯದವರು ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಪಡೆಯಲು ಕೇಂದ್ರದ “ಇ-ಶ್ರಮ್ʼ ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬೇಕು. ಈ ವ್ಯವಸ್ಥೆಯಲ್ಲಿ 398 ವರ್ಗದ ಅಸಂಘಟಿತ ಕಾರ್ಮಿಕರಿಗೆ ಅವಕಾಶ ನೀಡಲಾಗಿದೆ. ಜೊತೆಗೆ ಇಲ್ಲಿಯವರೆಗೂ 99.87 ಲಕ್ಷ ಮಂದಿ ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಉಳಿದವರೂ ಇದರ ಉಪಯೋಗ ಪಡೆಯಲು ಮುಂದಾಗಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಸ್ವತಂತ್ರ ಕಾರ್ಮಿಕರು(ಗಿಗ್) 2.39 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ. ಅವರಿಗೂ ಸಹ ವಿಮೆ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಅವರಲ್ಲಿ ಇಲ್ಲಿಯವರೆಗೂ ಕೇಲವ 10 ಸಾವಿರ ಜನರಷ್ಟೇ ನೋಂದಾಯಿಸಿದ್ದಾರೆ. ಹೀಗಾಗಿ ಅವರಿಗಾಗಿ ಪ್ರತ್ಯೇಕ ಮಂಡಳಿ ರಚಿಸುವ ಚಿಂತನೆ ಮಾಡಲಾಗಿದೆ. ದಿನಪತ್ರಿಕೆ ಹಾಕುವವರು 40 ರಿಂದ 50 ಸಾವಿರ ಮಂದಿ ಇದ್ದು, ಅವರಿಗೂ ಈ ವಿಮೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…