ಮೈಸೂರು

ಕಾರ್ಮಿಕರ ವೇತನ ಶೀಘ್ರದಲ್ಲೇ ಹೆಚ್ಚಳ: ಎಚ್‌.ಎನ್‌ ಗೋಪಾಲ ಕೃಷ್ಣ

ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ.

ಶುಕ್ರವಾರ ನಗರದ ವಿದ್ಯಾರಣ್ಯಪುರಂನಲ್ಲಿರುವ ಬಿಲ್ಡರ್ಸ್‌ ಚಾರಿಟಬಲ್‌ ಟ್ರಸ್ಟ್‌ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್‌ ವತಿಯಿಂದ ಕಾರ್ಮಿಕ ಕಾಯ್ದೆಗಳು ಮತ್ತು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು  ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನಿಷ್ಠ ವೇತನ ಪರಿಷ್ಕರಣೆಯು ಐದು ವರ್ಷಗಳ ಹಿಂದೆ ನಡೆದಿತ್ತು. 14 ಸಾವಿರ ರೂ.ಗಳನ್ನು ನಿಗಧಿಪಡಿಸಲಾಗಿದೆ. ಅದರಲ್ಲಿ ಜೀವನ ನಡೆಸಲು ಕಷ್ಟವೆಂದೂ ಹಲವು ಸಂಘಟನೆಗಳು ಹೇಳಿದ್ದವು. ಆದರೆ, ಸಂಘಟನೆ ಕೇಳಿದರೂ ಎಂದಾಕ್ಷಣ 35 ಸಾವಿರ ರೂ.ಗಳನ್ನು ನೀಡಲು ಸಾಧ್ಯವಿಲ್ಲ. ಇದೀಗ ವೈಜ್ಞಾನಿಕವಾಗಿ ನಿಗಧಿಪಡಿಸಿ, ಎಲ್ಲರಿಗೂ ಒಮ್ಮತವಾದ ಕನಿಷ್ಠ ವೇತನ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 20 ಸಾವಿರಕ್ಕೂ ಹೆಚ್ಚು ನೋಂದಾಯಿತ ಸಂಸ್ಥೆಗಳಿದ್ದು, ಒಟ್ಟು 65 ಲಕ್ಷ ಕಾರ್ಮಿಕರಿದ್ದಾರೆ. ಅವುಗಳಲ್ಲಿ ಅಸಂಘಟಿತ ವಲಯದಲ್ಲಿ 1.81 ಕೋಟಿ ಕಾರ್ಮಿಕರಿದ್ದಾರೆ. ಅಲ್ಲದೇ, 25 ಕಾರ್ಮಿಕ ಕಾಯ್ದೆಗಳನ್ನು ಕ್ರೋಢಿಕರಿಸಿ 4 ಕಾರ್ಮಿಕ ಸಂಹಿತೆಗಳು ಮುಂದಿನ ಆರ್ಥಿಕ ವರ್ಷದಿಂದ ಜಾರಿಗೆ ತರುವ ನಿರೀಕ್ಷೆಯಿದೆ. ಇದಕ್ಕಾಗಿ ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಕಾರ್ಮಿಕ ಇಲಾಖೆಗೆ 880 ಹುದ್ದೆಗಳನ್ನು ಮಂಜೂರಾಗಿವೆ. ಅದರಲ್ಲಿ 450 ಅಧಿಕಾರಿಗಳು ಅಷ್ಟೇ ಪ್ರಸ್ತುತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಇಲಾಖೆಯ ವ್ಯಾಪ್ತಿಯು ದೊಡ್ಡದಿದೆ ಎಂದು ತಿಳಿಸಿದರು.

1 ಸಾವಿರ ಕೋಟಿ ಕಾರ್ಮಿಕ ಸೆಸ್‌ ಸಂಗ್ರಹ
ವರ್ಷಕ್ಕೆ ಸರಾಸರಿ ಒಂದು ಸಾವಿರ ಕೋಟಿ ರೂ. ಕಾರ್ಮಿಕ ಸೆಸ್‌ ಸಂಗ್ರಹವಾಗುತ್ತಿದೆ. ರಾಜ್ಯದಲ್ಲಿ 38 ಲಕ್ಷ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿದ್ದಾರೆ. ಆದರೆ, ಲೇಬರ್‌ ವೆಲ್‌ಫೇರ್‌ ಬೋರ್ಡ್‌ನಿಂದ ಏಳು ಯೋಜನೆಗಳನ್ನು ಮಾತ್ರ ಜಾರಿಗೊಳಿಸಲಾಗಿದೆ. ಅದರಲ್ಲಿಯೇ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಅಲ್ಲದೇ, ಕಾರ್ಮಿಕ ಮಂಡಳಿಗೆ ಉದ್ಯೋಗದಾತರು ಪಾವತಿಸಬೇಕಾದ ಪಾಲನ್ನು ನಿಯಮಿತವಾಗಿ ಪಾವತಿಸಬೇಕು. ಕಳೆದ ವರ್ಷ 57 ಕೋಟಿ ರೂ.ಗಳನ್ನು ವೆಚ್ಚ ಮಾಡಿದ್ದು, 29 ಸಾವಿರ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಒದಗಿಸಿದ್ದೇವೆ ಎಂದರು.

ಇ-ಶ್ರಮ್‌ ಪೋರ್ಟಲ್‌ ನೋಂದಣಿ ಅಗತ್ಯ
ಅಸಂಘಟಿತ ವಲಯದವರು ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಪಡೆಯಲು ಕೇಂದ್ರದ “ಇ-ಶ್ರಮ್‌ʼ ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬೇಕು. ಈ ವ್ಯವಸ್ಥೆಯಲ್ಲಿ 398 ವರ್ಗದ ಅಸಂಘಟಿತ ಕಾರ್ಮಿಕರಿಗೆ ಅವಕಾಶ ನೀಡಲಾಗಿದೆ. ಜೊತೆಗೆ ಇಲ್ಲಿಯವರೆಗೂ 99.87 ಲಕ್ಷ ಮಂದಿ ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಉಳಿದವರೂ ಇದರ ಉಪಯೋಗ ಪಡೆಯಲು ಮುಂದಾಗಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಸ್ವತಂತ್ರ ಕಾರ್ಮಿಕರು(ಗಿಗ್) 2.39 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ. ಅವರಿಗೂ ಸಹ ವಿಮೆ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಅವರಲ್ಲಿ ಇಲ್ಲಿಯವರೆಗೂ ಕೇಲವ 10 ಸಾವಿರ ಜನರಷ್ಟೇ ನೋಂದಾಯಿಸಿದ್ದಾರೆ. ಹೀಗಾಗಿ ಅವರಿಗಾಗಿ ಪ್ರತ್ಯೇಕ ಮಂಡಳಿ ರಚಿಸುವ ಚಿಂತನೆ ಮಾಡಲಾಗಿದೆ. ದಿನಪತ್ರಿಕೆ ಹಾಕುವವರು 40 ರಿಂದ 50 ಸಾವಿರ ಮಂದಿ ಇದ್ದು, ಅವರಿಗೂ ಈ ವಿಮೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago