ಮೈಸೂರು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಪಶುಸಂಗೋಪನಾ ಸಚಿವ ವೆಂಕಟೇಶ್‌ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.

ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಒಟ್ಟು 14 ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಇಂದು ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಆಗಮಿಸುತ್ತಿವೆ.

ಅಭಿಮನ್ಯು, ಭೀಮ, ಕಂಜನ್‌, ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಕಾವೇರಿ ಹಾಗೂ ಲಕ್ಷ್ಮೀ ಸೇರಿ 9 ಆನೆಗಳು ನಾಡಿನತ್ತ ಪಯಣ ಬೆಳೆಸಿವೆ.

ಗಜಪಯಣಕ್ಕೆ ಹತ್ತಾರು ಜಾನಪದ ಕಲಾತಂಡಗಳು ಮೆರುಗು ತಂದವು. ಈ ವೇಳೆ ಗಜಪಯಣ ವೀಕ್ಷಣೆ ಮಾಡಲು ನೂರಾರು ಜನರು ಜಮಾವಣೆಗೊಂಡಿದ್ದರು.

ಗಜಪಯಣ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಜಿ.ಡಿ.ಹರೀಶ್‌ ಗೌಡ, ಪುಷ್ಪಾ ಅಮರನಾಥ್‌, ಸೇರಿದಂತೆ ಹಿರಿಯ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

12 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

12 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

13 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

13 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

13 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

14 hours ago