Mysore
26
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಎಚ್.ಡಿ.ಕೋಟೆ| ತಾಲ್ಲೂಕು ಆರೋಗ್ಯ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ಎಚ್.ಡಿ.ಕೋಟೆ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಟಿ. ರವಿಕುಮಾರ್‌ ಅವರು ಅಧ್ಯಕ್ಷತೆ ವಹಿಸಿ ಜಾಥಾಗೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆಯನ್ನೂ ನೀಡಿದರು.

ಈ ವೇಳೆ ಮಾತನಾಡಿದ ರವಿಕುಮಾರ್‌ ಅವರು, ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ ಅತ್ಯಗತ್ಯ. ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನೂ ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಏಪ್ರಿಲ್.7ನ್ನು ವಿಶ್ವ ಆರೋಗ್ಯ ದಿನವೆಂದು ಆಚರಿಸುತ್ತದೆ.

ಈ ವರ್ಷ ಎಲ್ಲರಿಗೂ ಸಮಾನ ಆರೋಗ್ಯ ಎಂಬ ಘೋಷಣೆಯನ್ನು ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ಆಹಾರದ ಮೂಲಕ ಆಗಮಿಸುವ ರೋಗಗಳ ಕಾಳಜಿಯನ್ನು ವಿಷಯವನ್ನಾಗಿ ಆರಿಸಿಕೊಂಡಿದೆ. “From farm to plate, make food safe.” (ಗದ್ದೆಯಿಂದ ತಟ್ಟೆಗೆ, ನಿಮ್ಮ ಆಹಾರ ಸುರಕ್ಷಿತವಾಗಿರಲಿ) ಎಂಬುದು ಲಾಭ ಮಾಡುವ ಗುರಿಯಿಂದ ಕೃತಕವಾಗಿ ಬೆಳೆಯನ್ನು ಪರಿವರ್ತಿಸುವ ರಾಸಾಯನಿಕ ಮತ್ತು ಇತರ ವಿಷಕಾರಿ ವಸ್ತುಗಳ ಬಗ್ಗೆ ಅರಿವು ಮೂಡಿಸುವುದು ಈ ಯೋಜನೆಯ ಪ್ರಮುಖ ಯೋಜನೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ”ಕೀರ್ತಿ, ಡಾ”.ಚಂದ್ರಕಲಾ, DHEO ಪದ್ಮಾವತಿ, ಚಲ್ಲಲ್, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ನಾಗೇಂದ್ರ, ರವಿರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

 

Tags:
error: Content is protected !!