ಎಚ್.ಡಿ.ಕೋಟೆ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಟಿ. ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಿ ಜಾಥಾಗೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆಯನ್ನೂ ನೀಡಿದರು.
ಈ ವೇಳೆ ಮಾತನಾಡಿದ ರವಿಕುಮಾರ್ ಅವರು, ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ ಅತ್ಯಗತ್ಯ. ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನೂ ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಏಪ್ರಿಲ್.7ನ್ನು ವಿಶ್ವ ಆರೋಗ್ಯ ದಿನವೆಂದು ಆಚರಿಸುತ್ತದೆ.
ಈ ವರ್ಷ ಎಲ್ಲರಿಗೂ ಸಮಾನ ಆರೋಗ್ಯ ಎಂಬ ಘೋಷಣೆಯನ್ನು ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ಆಹಾರದ ಮೂಲಕ ಆಗಮಿಸುವ ರೋಗಗಳ ಕಾಳಜಿಯನ್ನು ವಿಷಯವನ್ನಾಗಿ ಆರಿಸಿಕೊಂಡಿದೆ. “From farm to plate, make food safe.” (ಗದ್ದೆಯಿಂದ ತಟ್ಟೆಗೆ, ನಿಮ್ಮ ಆಹಾರ ಸುರಕ್ಷಿತವಾಗಿರಲಿ) ಎಂಬುದು ಲಾಭ ಮಾಡುವ ಗುರಿಯಿಂದ ಕೃತಕವಾಗಿ ಬೆಳೆಯನ್ನು ಪರಿವರ್ತಿಸುವ ರಾಸಾಯನಿಕ ಮತ್ತು ಇತರ ವಿಷಕಾರಿ ವಸ್ತುಗಳ ಬಗ್ಗೆ ಅರಿವು ಮೂಡಿಸುವುದು ಈ ಯೋಜನೆಯ ಪ್ರಮುಖ ಯೋಜನೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ”ಕೀರ್ತಿ, ಡಾ”.ಚಂದ್ರಕಲಾ, DHEO ಪದ್ಮಾವತಿ, ಚಲ್ಲಲ್, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ನಾಗೇಂದ್ರ, ರವಿರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…