ಎಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಎಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಎಚ್.ಡಿ.ಕೋಟೆ ವತಿಯಿಂದ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ”ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ”ಶ್ರೀನಿವಾಸ್ ಮತ್ತು ಹಿರಿಯ ವೈದ್ಯಾಧಿಕಾರಿ ಡಾ”ಸೋಮಣ್ಣ , ದಂತ ತಜ್ಞ ಡಾ” ಸಮೀವುಲ್ಲಾ ಷರೀಫ್ ಅವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆ ದಂತ ತಜ್ಞರಾದ ಡಾ”ಸಮೀವುಲ್ಲಾ ಶರೀಫ್ ರವರು ವಿಶ್ವದಲ್ಲೆಡೆ ವಿಶ್ವಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಾಯಿ ಆರೋಗ್ಯದ ಮಹತ್ವವನ್ನು ತಿಳಿಸಿಕೊಡುವುದು.
ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ. ಏಕೆಂದರೆ ಅನೇಕ ಕಾಯಿಲೆಗಳ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ. ಒಬ್ಬ ವ್ಯಕ್ತಿಯ ಬಾಯಿಯನ್ನು ಪರೀಕ್ಷಿಸಿ ಅವನು ಎಷ್ಟು ಆರೋಗ್ಯಕರವಾಗಿದ್ದಾನೆಂದು ಗುರುತಿಸಬಹುದು. ಬೀಡಿ, ಸಿಗರೇಟ್, ತಂಬಾಕು ಸೇವನೆಯಿಂದ ದೂರವಿರಬೇಕು. ಇದರಿಂದ ಬಾಯಿ ಕ್ಯಾನ್ಸರ್ ಬರುವ ಸಂಭಾವನೆ ಬಹಳ ಹೆಚ್ಚು ದುಶ್ಚಟಗಳಿಂದ ದೂರವಿದ್ದು ಬಾಯಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸುತ್ತಿದ್ದೇವೆ, ಎಲ್ಲರೂ ದಿನನಿತ್ಯ ದೇಹವನ್ನು ಸ್ವಚ್ಛಗೊಳಿಸುವ ಹಾಗೆ ದಂತವನ್ನು ಸ್ವಚ್ಛಗೊಳಿಸಬೇಕು. ದಿನಕ್ಕೆರಡು ಬಾರಿ ದಂತವನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ AO ಮೋಹನ್, ಕಚೇರಿ ಅಧೀಕ್ಷಕರಾದ ತಾರಾದೇವಿ, ಶುಶ್ರೂಷಕ ಮೇಲ್ವಿಚಾರಕರಾದ ಪರಿಮಳ ಗಾಳಂಕಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…