ಮೈಸೂರು

ಮಹಾವೀರರ ತತ್ವದಿಂದ ವಿಶ್ವಶಾಂತಿ ಸಾಧ್ಯ

ಮೈಸೂರು : ಭಗವಾನ್‌ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು  ಹೇಳಿದರು.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಅಯೋಜಿಸಿದ್ದ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಂತಿ ಮತ್ತು ಅಹಿಂಸೆ ಬಗ್ಗೆ ಹೆಚ್ಚಾಗಿ ಬೋಧನೆ ಮಾಡಿದ ಮಹಾವೀರರು ತೋರಿದ  ಸನ್ಮಾರ್ಗದಲ್ಲಿ  ನಡೆಯಬೇಕು ಎಂದರು.

ಭಗವಾನ್ ಮಹಾವೀರ ಅವರು ತಮ್ಮ ಉಪದೇಶ ಮತ್ತು ತತ್ವಗಳನ್ನು ಜೈನರಿಗೆ ಮಾತ್ರ ಹೇಳಿಕೊಡಲಿಲ್ಲ. ಸಮಸ್ತ ಮಾನವ ಕಲ್ಯಾಣಕ್ಕೆ ಹೇಳಿದ್ದಾರೆ. ಅವರ ತತ್ವಗಳನ್ನು ನಾವೆಲ್ಲರೂ ಪಾಲಿಸಬೇಕು. ಅಹಿಂಸಾ ತತ್ವಕ್ಕೆ ವಿಶ್ವದ ಇಡೀ ಮಾನವ ಕುಲವನ್ನು ಒಂದುಗೂಡಿಸುವ ಶಕ್ತಿಯಿದೆ. ಅಂಥ ತತ್ವ ಬೋಧಿಸಿದ ಭಗವಾನ ಮಹಾವೀರರ ಸಂದೇಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದು ಸಲಹೆ ನೀಡಿದರು.

ಹಿರಿಯ ಸಾಹಿತಿ ಪ್ರೊ.ಎಸ್.ಶಿವರಾಜಪ್ಪ ಮಾತನಾಡಿ, ಭಗವಾನ್ ಮಹಾವೀರರ ಜಯಂತಿ ಜೈನರಿಗೆ ಮಾತ್ರ ಸೀಮಿತವಲ್ಲ. ಈ ಜಗತ್ತಿನಲ್ಲಿ ವಾಸಮಾಡುವಂತಹ ಎಲ್ಲಾ ಜೀವಗಳಿಗೂ ಶ್ರೇಯಸನ್ನು ಬಯಸಿದಂತ ಮಹಾವೀರ, ಎಲ್ಲಾ ಧರ್ಮೀಯರಿಗೆ ಪ್ರಿಯವಾದ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.

ಧರ್ಮಗಳಲ್ಲಿ ಐಕ್ಯತೆ ಇಲ್ಲದೆ ಹೋದರೆ  ದೇಶ ನಾಶವಾಗುವುದರ ಜೊತೆಗೆ ಸಮಾಜ ಹಾಗೂ ಮನಸ್ಸುಗಳು ನಡುವೆ ವೈ ಮನಸ್ಸು ಉಂಟಾಗಿ ಧ್ವೇಷ ಅಸೂಯೆ‌ ಹೆಚ್ಚುತ್ತದೆ. ನಾವು ಧರ್ಮವನ್ನು ಹೇಳುತ್ತಿದ್ದೇವೆ ಹೊರತು ಆ ತತ್ವ ಸಿದ್ಧಾಂತಗಳನ್ನು ನಾವು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ ಸುದರ್ಶನ್, ಮೈಸೂರಿನ ಜೈನ ಸಮಾಜದ ಅಧ್ಯಕ್ಷ ಸುನಿಲ್ ಕುಮಾರ್ ಮತ್ತು ಕಾರ್ಯದರ್ಶಿಗಳು ಹಾಗೂ ಜೈನ ಧರ್ಮದ ಅಧ್ಯಕ್ಷರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

54 mins ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

1 hour ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

13 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

13 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

13 hours ago