ಮೈಸೂರು : ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವುಗಳ ದಿನಾಚರಣೆ ಆಚರಿಸಲಾಯಿತು. ಈ ವೇಳೆ 85 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ತಜ್ಞ ಸ್ನೇಕ್ ಶ್ಯಾಮ್ ರವರಿಗೆ ಸನ್ಮಾನ ಮಾಡಿ ಅಭಿನಂದಿಸಲಾಯಿತು.
ಬಳಿಕ ಮಾತನಾಡಿದ ಉರಗ ತಜ್ಞ ಸ್ನೇಕ್ ಶ್ಯಾಮ್, ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಮುಖ್ಯ ,ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಉಪಯುಕ್ತ ಸ್ಥಳದಲ್ಲಿಯೇ ಗಿಡಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಪರಿಸರವನ್ನು ಶುದ್ಧವಾಗಿಸುವ ಅಲ್ಪ ಸೇವೆಯನ್ನು ಮಾಡಿದಂತಾಗುತ್ತದೆ. ಪರಿಸರದಲ್ಲಿರುವ ಪ್ರತಿಯೊಂದು ಜೀವಿಯೂ ಒಂದನ್ನೊಂದು ಅವಲಂಬಿಸಿಯೇ ಬದುಕುವ ಕಾರಣ ಪ್ರತಿಯೊಂದಕ್ಕೂ ಪ್ರಾಮುಖ್ಯತೆಯಿದೆ. ಎಲ್ಲವನ್ನೂ ಗೌರವಿಸಿ ಎಂದು ಹೇಳಿದರು. ಬಳಿಕ ಉರಗ ಪ್ರಭೇದಗಳು, ಅವುಗಳ ಸಂತತಿ, ಹಾವಿನ ಕಡಿತದ ಬಳಿಕ ನಡೆಸುವ ಪ್ರಥಮ ಚಿಕಿತ್ಸೆಗಳ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಕೋವಿಡ್ ನಂತಹ ಕಷ್ಡಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ರವರು ಹಾವನ್ನ ಸಂರಕ್ಷಿಸಿದ್ದಾರೆ, ಅಂತರಾಷ್ಟ್ರೀಯ ಉರಗತಜ್ಞ ಸ್ನೇಕ್ ಶ್ಯಾಮ್ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. ಅಷ್ಟೇ ಅಲ್ಲದೇ 85 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ. ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ. ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ರವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು
ಕಾರ್ಯಕ್ರಮದಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ರಾಘವೇಂದ್ರ,ಪ್ರಕಾಶ್ ಪ್ರಿಯದರ್ಶನ್, ಪರಮೇಶ್ ಗೌಡ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಅಪೂರ್ವ ಸುರೇಶ್, ಬೈರತಿ ಲಿಂಗರಾಜು, ಸುಚಿಂದ್ರ, ಚಕ್ರಪಾಣಿ, ಎಸ್ ಎನ್ ರಾಜೇಶ್, ಸದಾಶಿವ್, ಸಚಿನ್ ನಾಯಕ್, ಸಫಿ, ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…