ಮೈಸೂರು

ಸೆಪ್ಟೆಂಬರ್ 27 ರಂದು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮೈಸೂರು: ಪ್ರವಾಸೋದ್ಯಮ ಇಲಾಖೆಯ ವತಿಯಿಂದ TOURISM AND PEACE- ಪ್ರವಾಸೋದ್ಯಮ ಮತ್ತು ಶಾಂತಿ ”ಘೋಷವಾಕ್ಯದಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೈಸೂರು ಅರಮನೆ ಆವರಣದಲ್ಲಿ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ.ಮಹದೇವಪ್ಪ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು,ಗಣ್ಯ ವ್ಯಕ್ತಿಗಳು, ಮೈಸೂರಿನ ಸಂಘ ಸಂಸ್ಥೆಗಳು, ಸರ್ವ ಧರ್ಮಗಳ ಪ್ರತಿನಿಧಿಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಕಲಾ ತಂಡಗಳು ಸೇರಿದಂತೆ ಸುಮಾರು 1000 ಜನ ಭಾಗವಹಿಸುತ್ತಿದ್ದಾರೆ.

ಕಾರ್ಯಕ್ರಮ ಉದ್ಘಾಟನೆಯ ನಂತರ ಅರಮನೆಯ ಆವರಣದಿಂದ ಕೋಟೆ ಆಂಜನೇಯ ಸ್ವಾಮಿ ಉತ್ತರ ದ್ವಾರ, ಕೆ.ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ ಮೂಲಕ ಹೈವೇ ವೃತ್ತಕ್ಕೆ ಬಂದು ಮೆರವಣಿಗೆಯು ಅಂತ್ಯಗೊಳ್ಳುವಂತೆ ಹಮ್ಮಿಕೊಳ್ಳಲಾಗಿರುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

1 hour ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

2 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

2 hours ago