ಮೈಸೂರು : ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21) ಮೃತ ದುರ್ದೈವಿ. ಪ್ರಜ್ವಲ್ ಗೆ ಆರು ದಿನಗಳ ಹಿಂದೆ ಪಾಂಡವಪುರ ರೈಲ್ವೆ ಸ್ಟೇಷನ್ ಬಳಿ ಅಪಘಾತವಾಗಿತ್ತು. ಈ ವೇಳೆ ಅಲ್ಲೆ ಇದ್ದ ಸ್ಥಳೀಯರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ವಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಪ್ರಜ್ವಲ್ ನ ಸ್ವಗ್ರಾಮವಾದ ಇಂಗಲಕುಪ್ಪೆಯಲ್ಲಿ ಇಂದು ಅಂತ್ಯಕ್ರಿಯೆ ನೆರವೇರಿದೆ.