ksdl ambassador
ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಇದು ಕಾಂಗ್ರೆಸ್ ಸರ್ಕಾರದ ಅವಿವೇಕದ ತೀರ್ಮಾನ ಎಂದು ಹೇಳಿದ್ದಾರೆ. ೧೯೧೬ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಕೃಷ್ಣರಾಜ ಒಡೆಯರ್ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು. ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು. ಇಂಥ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಅದು ಸಾಲದೆಂಬಂತೆ ಆರು ಕೋಟಿ ರೂ.ಗಳಿಗೂ ಹೆಚ್ಚು ರೂಪಾಯಿ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.
ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂಬುದು ಸರ್ಕಾರದ ನಿರ್ಧಾರವಾಗಿದ್ದರೆ ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಾಗಿತ್ತು. ತಮನ್ನಾ ಭಾಟಿಯಾಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಯದುವೀರ್ ಆರೋಪಿಸಿದ್ದಾರೆ. ತಮನ್ನಾ ಭಾಟಿಯಾ ಕರ್ನಾಟಕದ ಸಂಸ್ಕ ತಿ, ಇತಿಹಾಸದೊಂದಿಗೆ ಯಾವುದೇ ನಂಟು ಹೊಂದಿಲ್ಲ. ಕನ್ನಡತನದ ಗಂಧ ಗಾಳಿ ಗೊತ್ತಿಲ್ಲದ ಈ ನಟಿಯನ್ನು ನಮ್ಮ ‘ಗಂಧದ‘ದ ಸೋಪಿನ ಸಂಸ್ಥೆಗೆ ರಾಯಭಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.
ಸರ್ಕಾರ ತೀರ್ಮಾನ ಹಿಂಪಡೆಯಲಿ: ರಾಜ್ಯ ಸರ್ಕಾರ ಈ ಕೂಡಲೇ ಈ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ಕನ್ನಡಿಗರ ೬.೨೦ ಕೋಟಿ ರೂಪಾಯಿಯನ್ನು ಉಳಿಸಲಿ ಎಂದಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಸಾವಿರಾರು ಕೋಟಿ ರೂ. ಜನರಿಗೆ ನೀಡದೇ ಮಾತು ತಪ್ಪಿರುವ ಕಾಂಗ್ರೆಸ್ ಸರ್ಕಾರ, ಈಗ ಪರಭಾಷೆ ನಟಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…
ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…
ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ…
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…