yadhuveer wadiyar
ಮೈಸೂರು: ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ಧಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ ಬಹಿರಂಗ ಪಡಿಸಿಲ್ಲ. ಬೆಂಗಳೂರು ಕಾಲ್ತುಳಿತ ಘಟನೆಯಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ 11 ಮಂದಿ ಯುವಜನರು ಸಾವನ್ನಪ್ಪಿದ್ದಾರೆ. ಇದರಿಂದ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ.
ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ, ಜನರ ದಿಕ್ಕು ತಪ್ಪಿಸಲು ಮರು ಜಾತಿಗಣತಿಗೆ ಮುಂದಾಗಿದ್ದಾರೆ. ಕೇವಲ 90 ದಿನದಲ್ಲಿ ಮರು ಜಾತಿಗಣತಿ ನಡೆಸಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ಉಳಿಸಲು ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ವರ್ಗಗಳ ಹಿತವನ್ನು ಬಲಿಕೊಟ್ಟಿದೆ. ಈಗಾಗಲೇ ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸುವಂತೆ ಸೂಚಿಸಿದೆ. ಹಾಗಾಗಿ ರಾಜ್ಯದಲ್ಲಿ ಮರು ಜಾತಿಗಣತಿ ನಡೆಸುವ ಅವಶ್ಯಕತೆ ಇಲ್ಲ. ರಾಜ್ಯದ ಜಾತಿಗಣತಿ ವಿಚಾರವನ್ನು ರಾಹುಲ್ ಗಾಂಧಿ, ವೇಣುಗೋಪಾಲ್ ನಿರ್ಧರಿಸಲು ಮುಂದಾಗಿದ್ದು ಸರಿಯಲ್ಲ. ಮರು ಜಾತಿಗಣತಿ ನಡೆಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…
ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…
ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…