ಮೈಸೂರು: ಮೈಸೂರು ನಗರವು ಹಿಂದೆ ಹೆಚ್ಚು ಬಾರಿ ಸ್ವಚ್ಛನಗರಿ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಆ ಅವಕಾಶ ಕೈತಪ್ಪಿ ಹೋಗಿದೆ. ಮತ್ತೇ ಮೈಸೂರಿಗೆ ಪ್ರಶಸ್ತಿ ಬರಲು ನಗರದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಸಿಎಫ್‌ಟಿಆರ್‌ಐನಲ್ಲಿ ‘ಇಕೋ ಫ್ಯಾಕ್ಟರಿ ಫೌಂಡೇಶನ್’ ಸಹಯೋಗದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸ್ವಚ್ಛನಗರಿ ಪ್ರಶಸ್ತಿ ಬರಲು ಹಲವಾರು ಮಾನದಂಡಗಳಿವೆ. ಮೈಸೂರಿನಲ್ಲಿ ಸ್ವಚ್ಛತೆಗೆ ಹಿಂದಿನಿಂದಲೂ ಆದ್ಯತೆ ನೀಡಲಾಗಿದೆ. ಆದರೆ, ಈಗ ಕಾಮಗಾರಿಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಅವುಗಳ ತ್ಯಾಜ್ಯ ಸಾಗಣೆ ದುಸ್ತರವಾಗಿದೆ ಎಂದರು.
ನಗರದ ಸುತ್ತಮುತ್ತ ಅನೇಕ ಬಡಾವಣೆಗಳು ಬೆಳೆದಿವೆ. ಅವುಗಳ ಪ್ರಮಾಣಕ್ಕೆ ಅನುಗುಣವಾಗಿ ಕಸ ಸಂಗ್ರಹಣೆ, ವಿಲೇವಾರಿ ಹಾಗೂ ತ್ಯಾಜ್ಯ ಸಂಸ್ಕರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇವುಗಳನ್ನು ಬಲವರ್ಧನೆಗೊಳಿಸಬೇಕಾದ ಅವಶ್ಯಕತೆ ಇದೆ. ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಚಟುವಟಿಕೆಗಳಾಗಬೇಕು ಎಂದರು.
ಸಿಎಫ್‌ಟಿಆರ್‌ಐ ನಿರ್ದೇಶಕರಾದ ಶ್ರೀದೇವಿ ಅನ್ನಪೂರ್ಣಸಿಂಗ್, ಮಾಜಿ ಶಾಸಕ ಎಲ್.ನಾಗೇಂದ್ರ, ಸಿಎಫ್‌ಟಿಆರ್‌ನ ವಿಜ್ಞಾನಿಗಳು ಉಪಸ್ಥಿತರಿದ್ದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…