Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬೋಗಾದಿಯಲ್ಲಿ ಬಿರುಸಿನ ಪ್ರಚಾರ ನಡೆಸಿದ ಯದುವೀರ್‌ !

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೋಗಾದಿ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ಬೋಗಾದಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಆರತಿ ಬೆಳಗಿ ಪಟಾಕಿ ಸಿಡಿಸಿ, ಜೈಕಾರದ ಘೋಷಣೆಗಳನ್ನು ಕೂಗಿದರು. ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಹಳ್ಳಿಯ ವಾತಾವರಣ ನೋಡಿದ್ದೇನೆ. ಸಮಸ್ಯೆಗಳನ್ನು ಗಮನಿಸಿದ್ದೇನೆ. ಮುಂದಿನ ದಿನಗಳಲ್ಲಿ ನಿಮ್ಮ ನೋವು-ನಲಿವುಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ. ಮೈಸೂರು-ಕೊಡಗು ಜಿಲ್ಲೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಬಿಜೆಪಿ-ಜಾ.ದಳದ ಮೈತ್ರಿಕೂಟದ ಅಭ್ಯರ್ಥಿ ಯದುವೀರ್‌ಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಂದು ಲಕ್ಷ ಲೀಡ್ ಬರುವಂತೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಕವೀಶ್ ಗೌಡ, ಅರುಣ್‌ಕುಮಾರ್ ಗೌಡ, ಹೇಮಂತಕುಮಾರ್ ಗೌಡ ಸಾಥ್ ಮತ್ತಿತರರು ಪಾಲ್ಗೊಂಡಿದ್ದರು.

Tags: