ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗ ನೀಡಿರುವ ಮಾಹಿತಿಯಲ್ಲಿ ಇಂದು ಬೆಳಿಗ್ಗೆ 10.15 ಗಂಟೆ ವೇಳೆಗೆ ಯದುವೀರ್ ಅವರು 218031 ಮತ ಪಡೆದರೇ, ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು 170355 ಮತ ಗಳಿಸಿ ಕಣದಲ್ಲಿದ್ದಾರೆ.
ಇನ್ನು 47676 ಮತಗಳ ಅಂತರಿದಿಂದ ಯದುವೀರ್ ಒಡೆಯರ್ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.





