ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಮೈಸೂರು ಕ್ಷೇತ್ರದ ಅಭ್ಯರ್ಥಿಯಾಗಿ ನೇಮಕಗೊಂಡ ಬೆನ್ನಲ್ಲೇ ಭರ್ಜರಿ ಪ್ರಚಾರ ಆರಂಭಿಸಿರುವ ರಾಜವಂಶಸ್ಥ ಯದುವೀರ್, ಎಲ್ಲಾ ಹಿರಿಯ ನಾಯಕರನ್ನು ಭೇಟಿಯಾಗಿ ಸಮಾಲೋಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿರುವ ಯದುವೀರ್ ಚುನಾವಣಾ ಸಂಬಂಧ ಮಾತುಕತೆ ನಡೆಸಿದ್ದಾರೆ.
ಇದರ ಮಧ್ಯೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ತಮ್ಮ ಹಿಂದಿನ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ. ತಾವು 8ನೇ ವಯಸ್ಸಿನಲ್ಲಿ ರಾಜಮನೆತನಕ್ಕೆ ದತ್ತು ಸ್ವೀಕಾರಗೊಂಡಾಗ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು ಎಂದು ಹೇಳಿದರು. ಇದಕ್ಕೆ ಪ್ರಸಾದ್ ಹೌದು ಎಂದು ಹಿಂದಿನ ಘಟನೆಯನ್ನು ನೆನೆದಿದ್ದಾರೆ.