ಮೈಸೂರು : ಉಡುಪಿಯ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಅವರನ್ನು ಭೇಟಿ ಮಾಡಿದ ಯದುವೀರ್ ಅವರು ಆಶಿರ್ವಾದ ಪಡೆದರು.
ನಗರದ ಟಿ ಕೆ ಲೇಔಟ್ ನಲ್ಲಿರುವ ಶ್ರೀಕೃಷ್ಣ ದಾಮಕ್ಕೆ ಆಗಮಿಸಿದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಶ್ರೀಗಳಿಂದ ಆಶೀರ್ವಾದ ಪಡೆದರು.
ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್ ಶ್ರೀವತ್ಸ, ಉಪಾಧ್ಯಕ್ಷ ಜೋಗಿ ಮಂಜು, ವಸಂತ್ ಕುಮಾರ್, ಹೋಟೆಲ್ ಮಾಲೀಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಶಾಸ್ತ್ರಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಪೂರ್ವ ಸುರೇಶ್, ಕಿಶೋರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.