ಮೈಸೂರು : ಮೈಸೂರು-ಕೊಡಗು ಲೋಕಸಭಾ ಚುನಾವಣ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಮಪತ್ರ ಸಲ್ಲಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.