Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಹಿರಿಯ ಚೇತನಗಳಿಗೆ ಗೌರವ ಸಮರ್ಪಿಸಿದ ಯದುವೀರ್‌ !

ಮೈಸೂರು : ಲೋಕಸಭಾ ಚುನಾವಣೆ ಬೆನ್ನಲ್ಲಿ ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಈ ವೇಳೆ ಇಂದು ಮುಂಜಾನೆಯಿಂದಲೆ ನಾಡು ಕಟ್ಟಿ-ಬೆಳೆಸಿದ ಹಾಗು ಜ್ಞಾನ ಮಾರ್ಗ ತೋರಿದ, ಹಿರಿಯ ಹಮನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ನಗರದ  ಅಗ್ರಹಾರದ ಬಳಿ ಇರುವ ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಪಿತ ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌,  ಮೈಸೂರು ರಾಜವಂಶದ ಹಿರಿಯರಾದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌, ಗನ್‌ಹೌಸ್‌ನಲ್ಲಿರುವ ರಾಷ್ಟ್ರಕವಿ ಕುವೆಂಪು,  ಮೈಸೂರಿನ ಮೆಟ್ರೋ ಪಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ವರನಟ ಡಾ.ರಾಜ್‌ಕುಮಾರ್‌ ಸೇರಿದಂತೆ ನಗರದಾದ್ಯಂತ ಇರುವ ಹಿರಿಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.

ಇಂದು ಅರಮನೆ ಮುಂಭಾಗ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಬೃಹತ್‌ ಸಮಾವೇಶ ನಡೆಯಲಿದ್ದು ಬಳಿಕ ಬೆಂಬಲಿಗರು ಹಾಗೂ ಮೈತ್ರಿ ಪಕ್ಷಗಳ ಕಾರ್ಯಕರ್ತರನ್ನೊಳಗೊಂದಡು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಯದುವೀರ್‌ ನಾಮಪತ್ರ ಸಲ್ಲಿಸಲಿದ್ದಾರೆ.

Tags: