ಮೈಸೂರು : ಲೋಕಸಭಾ ಚುನಾವಣೆ ಬೆನ್ನಲ್ಲಿ ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಈ ವೇಳೆ ಇಂದು ಮುಂಜಾನೆಯಿಂದಲೆ ನಾಡು ಕಟ್ಟಿ-ಬೆಳೆಸಿದ ಹಾಗು ಜ್ಞಾನ ಮಾರ್ಗ ತೋರಿದ, ಹಿರಿಯ ಹಮನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ನಗರದ ಅಗ್ರಹಾರದ ಬಳಿ ಇರುವ ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಪಿತ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಮೈಸೂರು ರಾಜವಂಶದ ಹಿರಿಯರಾದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಗನ್‌ಹೌಸ್‌ನಲ್ಲಿರುವ ರಾಷ್ಟ್ರಕವಿ ಕುವೆಂಪು, ಮೈಸೂರಿನ ಮೆಟ್ರೋ ಪಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ವರನಟ ಡಾ.ರಾಜ್‌ಕುಮಾರ್ ಸೇರಿದಂತೆ ನಗರದಾದ್ಯಂತ ಇರುವ ಹಿರಿಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.
ಇಂದು ಅರಮನೆ ಮುಂಭಾಗ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಬೃಹತ್ ಸಮಾವೇಶ ನಡೆಯಲಿದ್ದು ಬಳಿಕ ಬೆಂಬಲಿಗರು ಹಾಗೂ ಮೈತ್ರಿ ಪಕ್ಷಗಳ ಕಾರ್ಯಕರ್ತರನ್ನೊಳಗೊಂದಡು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಯದುವೀರ್ ನಾಮಪತ್ರ ಸಲ್ಲಿಸಲಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…