ಮೈಸೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಚರ್ಚಿಸಿ, ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಶ್ವನಾಥ್, ರಾಜಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು ಎಂದು ಹೇಳಿದರು.
ಮೈಸೂರು ಅರಸರು ಜಾತಿ ಮುಂದಿಟ್ಟುಕೊಂಡು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು.
ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದುದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸಿವಂತೆ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…