ದಸರಾ ಸಡಗರ ಹೆಚ್ಚಿಸಿದ ಸಿಹಿ ಸುದ್ದಿ
ಮೈಸೂರು: ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ. ಯದುವೀರ್ ಮತ್ತು ತ್ರಿಷಿಕಾ ಕುಮಾರಿ ದಂಪತಿ ತಮ್ಮ ಎರಡನೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.
ಆಯುಧ ಪೂಜೆ ದಿನವೇ ಗಂಡು ಮಗು ಜನಿಸಿದ್ದು ರಾಜವಂಶಸ್ತರಲ್ಲಿ ಸಂತೋಷ ಮನೆ ಮಾಡಿದೆ. ಯದುವೀರ್ ಖಾಸಗಿ ದರ್ಬಾರ್ ನಡೆಸಲು ಕಂಕಣಧಾರಿಯಾಗಿ ಮಹಾನವಮಿ ಪೂಜೆಯಲ್ಲಿ ಪಾಲ್ಗೊಂಡಿದ್ದಾಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತ್ರಿಷಿಕಾ ಅವರಿಗೆ ಗಂಡು ಮಗು ಹುಟ್ಟಿದೆ ಎಂದು ಅರಮನೆ ಮೂಲಗಳು ತಿಳಿಸಿವೆ. ಇದರಿಂದ ದಸರಾಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
2016ರಲ್ಲಿ ಮದುವೆಯಾಗಿದ್ದ ದಂಪತಿಗೆ 2017ರ ಡಿಸೆಂಬರ್‌ನಲ್ಲಿ ಆದ್ಯವೀರ್ ನರಸಿಂಹರಾಜ ಒಡೆಯರ್ ಜನಿಸಿದ್ದನು.
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…