Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೈಸೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಯದುವೀರ್‌ ಪರಿಶೀಲನೆ

ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್‌ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು. 

ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೌಲಭ್ಯಗಳ ಸಂಪೂರ್ಣ ಸಮೀಕ್ಷೆಯನ್ನು ನಡೆಸಿದರು.

ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ ವಿಸ್ತರಣೆಯ ಕುರಿತು ವಿಮಾನ ನಿಲ್ದಾಣದ ನಿರ್ದೇಶಕರಾದ ಅನೂಪ್ ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಸಂಸದ ಯದುವೀರದದ ಅವರು, ಮೈಸೂರು ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ನಮ್ಮ ಪ್ರಯತ್ನಗಳಿಗೆ ನಾಗರಿಕ ವಿಮಾನಯಾನ ಸಚಿವಾಲಯವು ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಮತ್ತು ನಮ್ಮ ನಗರದ ವಿಮಾನ ನಿಲ್ದಾಣವು ಅತ್ಯುನ್ನತ ಗುಣಮಟ್ಟವನ್ನು ಪೂರೈಸುತ್ತದೆ. ಮೈಸೂರು-ಕೊಡಗು ಪ್ರದೇಶವನ್ನು ತಲುಪಲು ಮೈಸೂರು ವಿಮಾನ ನಿಲ್ದಾಣವನ್ನು ಕೇಂದ್ರವಾಗಿಸುವುದು ನಮ್ಮ ಗುರಿಯಾಗಿರುತ್ತದೆ ಎಂದು ತಿಳಿಸಿದರು.

Tags: