Mysore
27
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಮೈಸೂರಿನ ಕನಕ ಗುರುಪೀಠಕ್ಕೆ ರಾಜವಂಶಸ್ಥ ಯದುವೀರ್‌ ಭೇಟಿ!

ಮೈಸೂರು: ನಗರದ ಸಿದ್ದಾರ್ಥ ನಗರ ಕಾಗಿನೆಲೆ ಕನಕ ಶಾಖಾ ಮಠಕ್ಕೆ ಭೇಟಿ ನೀಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾ. ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಅವರು ಕಾಗಿನೆಲೆ ಕನಕ ಗುರುಪೀಠದ ಮೈಸೂರು ಶಾಖಾ ಅಧ್ಯಕ್ಷರಾದ ಶ್ರೀ ಶಿವಾನಂದ ಪುರಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಉಭಯ ಅಭ್ಯರ್ಥಿಗಳ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ ಕಲೆ, ಸಂಸ್ಕೃತಿ, ಧರ್ಮ, ಸಂಸ್ಕಾರ ಉಳಿಯುವಲ್ಲಿ ಮಹಾರಾಜರ ಪಾತ್ರ ಮಹತ್ವದ್ದಾಗಿದೆ ಎಂದು ಸ್ಮರಿಸಿದರು. ಯುವಕರಾದ ಯಧುವೀರ, ಹಾಗೂ ಬಾಲರಾಜ್ ಈ ಅವಿಭಜಿತ ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸಲಿ. ಅಭಿವೃದ್ಧಿಗಾಗಿ ಪ್ರಧಾನಿ ಮೋದಿಯೊಂದಿಗೆ ನೀವು ಕೈ ಜೋಡಿಸಿ ಎಂದು ಕರೆ ನೀಡಿದರು.

ಬಳಕ ಮಾತನಾಡಿದ ರಾಜವಂಶಸ್ಥ ಯದುವೀರ್‌, ನಮ್ಮ ಸಂಸ್ಥಾನಕ್ಕು ಶ್ರೀಗಳ ಮಠಕ್ಕೂ ಅಭಿನಾಭವ ಸಂಬಂಧ ಇದೆ. ಶ್ರೀಗಳು ತುಂಬು ಮನಸ್ಸಿನಿಂದ ಹರಿಸಿದ್ದಾರೆ. ಕುರುಬ ಸಮಾಜ ಹಾಗೂ ಮಠದ ಏಳಿಗೆಗಾಗಿ ಶ್ರಮಿಸುತ್ತೇನೆ. ನಮ್ಮ ಪೂರ್ವಜರು ಮಾಡಿರುವ ಕಾರ್ಯ ಮುಂದುವರಿಸುವ ಕೆಲಸಕ್ಕೆ ಕಂಕಣ ಬದ್ದನಾಗಿರುತ್ತೇನೆ ಎಂದು ತಿಳಿಸಿದರು.

ಮಾಜಿ ಸಚಿವ ಡಾ. ಸಿ.ಎನ್ ಅಶ್ವಥ್‌ ನಾರಾಯಣ, ಶಾಸಕ ಟಿ.ಎಸ್ ಶ್ರೀವತ್ಸ, ಜಿಲ್ಲಾ ಅಧ್ಯಕ್ಷ ಮಹದೇವ ಸ್ವಾಮಿ, ಮುಖಂಡರುಗಳು ಸೇರಿದಂತೆ ಇತರರು ಹಾಜರಿದ್ದರು.

Tags:
error: Content is protected !!