ಮೈಸೂರು: ನಗರದ ಸಿದ್ದಾರ್ಥ ನಗರ ಕಾಗಿನೆಲೆ ಕನಕ ಶಾಖಾ ಮಠಕ್ಕೆ ಭೇಟಿ ನೀಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾ. ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಅವರು ಕಾಗಿನೆಲೆ ಕನಕ ಗುರುಪೀಠದ ಮೈಸೂರು ಶಾಖಾ ಅಧ್ಯಕ್ಷರಾದ ಶ್ರೀ ಶಿವಾನಂದ ಪುರಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಉಭಯ ಅಭ್ಯರ್ಥಿಗಳ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ ಕಲೆ, ಸಂಸ್ಕೃತಿ, ಧರ್ಮ, ಸಂಸ್ಕಾರ ಉಳಿಯುವಲ್ಲಿ ಮಹಾರಾಜರ ಪಾತ್ರ ಮಹತ್ವದ್ದಾಗಿದೆ ಎಂದು ಸ್ಮರಿಸಿದರು. ಯುವಕರಾದ ಯಧುವೀರ, ಹಾಗೂ ಬಾಲರಾಜ್ ಈ ಅವಿಭಜಿತ ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸಲಿ. ಅಭಿವೃದ್ಧಿಗಾಗಿ ಪ್ರಧಾನಿ ಮೋದಿಯೊಂದಿಗೆ ನೀವು ಕೈ ಜೋಡಿಸಿ ಎಂದು ಕರೆ ನೀಡಿದರು.
ಬಳಕ ಮಾತನಾಡಿದ ರಾಜವಂಶಸ್ಥ ಯದುವೀರ್, ನಮ್ಮ ಸಂಸ್ಥಾನಕ್ಕು ಶ್ರೀಗಳ ಮಠಕ್ಕೂ ಅಭಿನಾಭವ ಸಂಬಂಧ ಇದೆ. ಶ್ರೀಗಳು ತುಂಬು ಮನಸ್ಸಿನಿಂದ ಹರಿಸಿದ್ದಾರೆ. ಕುರುಬ ಸಮಾಜ ಹಾಗೂ ಮಠದ ಏಳಿಗೆಗಾಗಿ ಶ್ರಮಿಸುತ್ತೇನೆ. ನಮ್ಮ ಪೂರ್ವಜರು ಮಾಡಿರುವ ಕಾರ್ಯ ಮುಂದುವರಿಸುವ ಕೆಲಸಕ್ಕೆ ಕಂಕಣ ಬದ್ದನಾಗಿರುತ್ತೇನೆ ಎಂದು ತಿಳಿಸಿದರು.
ಮಾಜಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ, ಶಾಸಕ ಟಿ.ಎಸ್ ಶ್ರೀವತ್ಸ, ಜಿಲ್ಲಾ ಅಧ್ಯಕ್ಷ ಮಹದೇವ ಸ್ವಾಮಿ, ಮುಖಂಡರುಗಳು ಸೇರಿದಂತೆ ಇತರರು ಹಾಜರಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…