ಮೈಸೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಿನ್ನೆಲೆ ಮೈಸೂರಿನಲ್ಲಿ ವಿಶೇಷ ಮ್ಯಾರಥಾನ್ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ನಗರದ ಓವೆಲ್ ಮೈದಾನದ ಓಟಗಾರರಿಂದ ಆಯೋಜನೆ ಮಾಡಲಾಗಿದ್ದ ಮ್ಯಾರಥಾನ್ ಸ್ಪರ್ಧೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಾರಾ ಮಹೇಶ್, ಹಿರಿಯ ವಕೀಲರು ಹಾಗೂ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕರಾದ ಎಚ್.ಎನ್ ವೆಂಕಟೇಶ್ ಸೇರಿ ಹಲವರು ಭಾಗಿಯಾಗಿದ್ದರು. ಮಕ್ಕಳು, ಹಿರಿಯರು, ಸೈನಿಕರು ಮ್ಯಾರಥಾನ್‌ನಲ್ಲಿ ಭಾಗಿಯಾಗಿದ್ದರು.