ಮೈಸೂರು: ಮೈಸೂರಿನ ಪ್ರತಿಷ್ಠಿತ ಜೆಎಸ್‌ಎಸ್ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಪ್ರತಿಮೆ ವಿಚಾರವನ್ನು ಕಾಂಗ್ರೆಸ್ ಮುನ್ನಲೆಗೆ ತಂದಿದ್ದು, ಮೈಸೂರು-ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶ್ರೀಗಳ ಪ್ರತಿಮೆ ವಿರುದ್ಧ ನೀಡಿರುವ ಪ್ರಕರಣ ವಾಪಾಸ್ ಪಡೆದು ಕ್ಷಮೆ ಕೇಳುವಂತೆ ಕಾಂಗ್ರೆಸ್ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಗನ್‌ಹೌಸ್ ಬಳಿ ರಾತ್ರೋರಾತ್ರಿ ದೇಶಿಕೇಂದ್ರ ಸ್ವಾಮಿಗಳ ಪ್ರತಿಮೆ ಸ್ಥಾಪಿಸಲಾಗಿತ್ತು. ಇದಕ್ಕೆ ರಾಜಮನೆತನದವರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಇನ್ನು ಈ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್ ಮಾಜಿ ಮೇಯರ್ ಬಿ.ಎಲ್ ಭೈರಪ್ಪ ಈ ಬಗ್ಗೆ ಮಾತನಾಡಿದ್ದಾರೆ.
ತ್ರಿವಿಧ ದಾಸೋಹಿ ಸುತ್ತೂರು ಸ್ವಾಮಿಗಳ ಪ್ರತಿಮೆ ಅನಾವರಣಕ್ಕೆ ಮೈಸೂರು ರಾಜಮನೆತನ ವಿರೋಧ ವ್ಯಕ್ತಿಪಡಿಸಿದೆ. ಆದರೇ ಚುನಾವಣೆಗೆ ಸುತ್ತೂರು ಶ್ರೀಗಳ ಆಶೀರ್ವಾದ ಬೇಕು ಎಂದು ಯದುವೀರ್ ಅವರು ಮಠಕ್ಕೆ ಹೋಗುವುದಕ್ಕೆ ಯಾವ ನೈತಿಕತೆಯಿದೆ. ಎಲ್ಲಾ ಸಮುದಾಯದ ಏಳಿಗೆಗಾಗಿ ದುಡಿದು, ಬಿಕ್ಷೆ ಬೇಡಿ ಅನ್ನ ದಾಸೋಹ ನಡೆಸುತ್ತಿದ್ದ ಶ್ರೀಗಳ ಪ್ರತಿಮೆ ಅನಾವರಣಕ್ಕೆ ನೀವು ಅವಕಾಶ ಯಾಕೆ ಕೊಡುತ್ತಿಲ್ಲ ಎಂದು ಕಿಡಿಕಾರಿದರು.
ಈ ಸಂಬಂಧ ಸುಪ್ರೀಂ ನಲ್ಲಿ ಪ್ರಕರಣ ನಡೆಯುತ್ತಿದೆ. ಇದನ್ನು ಯದುವೀರ್ ಅವರು ವಾಪಾಸ್ ಪಡೆದು ಪ್ರತಿಮೆ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು. ಇದರಿಂದ ನಿಮ್ಮ ಘನತೆ ಇನ್ನೂ ಹೆಚ್ಚಾಗಲಿದೆ. ರಾಜ್ಯ ಸರ್ಕಾರ, ಮಹಾನಗರ ಪಾಲಿಕೆಯಿಂದಲೂ ಅನುಮತಿ ಪಡೆದಿದ್ದರು ಅದಕ್ಕೆ ನೀವು ತಡೆಯೊಡ್ಡಿರುವುದು ಸರಿಯಲ್ಲ. ಈ ಬಗ್ಗೆ ಭಹಿರಂಗ ಕ್ಷಮೆ ಕೇಳಬೇಕು ಎಂದು ಮಾಜಿ ಮೇಯರ್ ಭೈರಪ್ಪ, ಯದುವೀರ್ ಒಡೆಯರ್ ಅವರನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…