Mysore
22
overcast clouds

Social Media

ಭಾನುವಾರ, 13 ಜುಲೈ 2025
Light
Dark

ಲೋಕಸಭೆ ಚುನಾವಣೆ 2024: ಏಪ್ರಿಲ್‌ 3ಕ್ಕೆ ಯದುವೀರ್‌ ನಾಮಪತ್ರ ಸಲ್ಲಿಕೆ !

ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ರಾಜ್ಯಾದ್ಯಂತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.

ಇದರ ಬೆನ್ನಲ್ಲೇ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಮ್ಮ ನಾಮಪತ್ರ ಸಲ್ಲಿಸುವ ದಿನಾಂಕವನ್ನು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,  ಏಪ್ರಿಲ್‌ 3ರ ಬೆಳಗ್ಗೆ  10.30ಕ್ಕೆ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮೈಸೂರು-ಕೊಡಗು ಜನತೆ ಕಾರ್ಯಕ್ರಮದಲ್ಲಿ ಭಾಗಿಯಾವಗುವ ಮೂಲಕ ಬೆಂಬಲ ನೀಡಿ ಆಶೀರ್ವದಿಸಬೇಕಾಗಿ ಯದುವೀರ್‌ ವಿನಂತಿ ಮಾಡಿಕೊಂಡಿದ್ದಾರೆ.

Tags:
error: Content is protected !!