ಮೈಸೂರು

ಯದುವೀರ್‌ ಆಸ್ತಿ ಮೌಲ್ಯ ಎಷ್ಟು ಗೊತ್ತಾ: ಸ್ಥಿರಾಸ್ತಿ-ಚರಾಸ್ತಿ ಮಾಹಿತಿ!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು (ಏ.೧) ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜತೆ ಸೇರಿ ನಾಮಪತ್ರ ಸಲ್ಲಿಸಿದರು.

ಉಮೇದುಗಾರಿಗೆ ಸಲ್ಲಿಸುವ ವೇಳೆ ತಮ್ಮ ಆಸ್ತಿ ವಿವರಗಳನ್ನು ಸಹಾ ನಮೂದಿಸಿರುವ ಯದುವೀರ್‌ ಅವರು ತಮಗೆ ಯಾವುದೇ ಕೃಷಿ ಜಮೀನು ಹಾಗೂ ಸ್ವಂತ ಮನೆಯಿಲ್ಲ ಎಂದು ಹೇಳಿಕೊಂಡಿದ್ದಾರೆ.

ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಳಿ ಆಸ್ತಿ ಎಷ್ಟಿದೆ ಎನ್ನುವುದನ್ನು ನೋಡುವುದಾದರೆ, ಚರಾಸ್ತಿ ಮೌಲ್ಯ 4,99,59,303 ರೂಪಾಯಿ ಇದೆ. ಆದ್ರೆ, ಯದುವೀರ್ ಹೆಸರಿನಲ್ಲಿ ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಇಲ್ಲ ಇಲ್ಲದಿರುವುದೇ ವಿಶೇಷ.

ಇನ್ನು ಯದುವೀರ್​ ಒಡೆಯರ್ ಅವರ 2 ಬ್ಯಾಂಕ್ ಖಾತೆಗಳಲ್ಲಿ 23.55 ಲಕ್ಷ ಹಣ ಇದೆ. ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಶೇರ್ ಹೊಂದಿದ್ದಾರೆ. ಇನ್ನು 4 ಕೆಜಿ ಚಿನ್ನ ಮತ್ತು 20 ಕೆಜಿ ಬೆಳ್ಳಿ ಇದೆ ಎಂದು ನಾಮಪತ್ರ ಅಫಿಡೆವಿಟ್​ನಲ್ಲಿ ಘೋಷಿಸಿಕೊಂಡಿದ್ದಾರೆ.

ಯದುವೀರ್‌ ಅವರು ಮಹಾರಾಜರೇ ಆಗಿದ್ದರು, ಅವರ ಬಳಿ ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಇಲ್ಲ. ವಾಣಿಜ್ಯ ಕಟ್ಟಡಗಳಿಲ್ಲ. ಬ್ಯಾಂಕ್​ನಿಂದ ಸಾಲ ಸಹ ಪಡೆದಿಲ್ಲ. ಯಾವುದೇ ಆದಾಯ ತೆರಿಗೆ ಹಣ ಬಾಕಿ ಉಳಿಸಿಕೊಂಡಿಲ್ಲ. ಮತ್ತು ತಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ತಮ್ಮ ಅಫಿಡವಿಟ್‌ನಲ್ಲಿ ಮಾಹಿತಿ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

50 mins ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

1 hour ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

13 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

13 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

13 hours ago