ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ.
ನಂಜನಗೂಡಿನಲ್ಲಿ ಇಂದು (ಏ.16) ಮಾತನಾಡಿದ ಅವರು, ಜಾತಿಗಣತಿಯಿಂದ ಹಿಂದುಳಿದ ವರ್ಗಕ್ಕೆ ಎಲ್ಲಿ ಹೆಚ್ಚು ಮೀಸಲಾತಿ ಸಿಗುತ್ತದಯೋ ಎಂದು ಬಿಜೆಪಿ ನಾಯಕರಿಗೆ ಭಯವಿದೆ. ಅದಕ್ಕಾಗಿ ಜಾತಿಗಣತಿಯನ್ನು ವಿರೋಧ ಮಾಡುತ್ತಿದ್ದಾರೆ. ಆದರೆ ನಾವು ಅವರ ವಿರೋಧಕ್ಕೆ ಮಣೆ ಹಾಕದೆ ವರದಿ ಜಾರಿಗೆ ಬದ್ದ ಎಂದು ಹೇಳಿದ್ದಾರೆ.
ಇದನ್ನೂ ಓದಿ:- ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ: ಸಿಎಂ ಸಿದ್ದರಾಮಯ್ಯ
ಈಗಾಗಲೇ ಜಾತಿಗಣತಿಯನ್ನು ಸಂಪುಟದ ಮುಂದೆ ಮಂಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನಾಳೆ ಸಚಿವರ ಜೊತೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಮಾಡಲಿದ್ದಾರೆ ಎಂದರು.
ಹೆಚ್ಚಿನ ಮಾಹಿತಿ:- ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕಾಂತರಾಜು ಆಯೋಗ ಹಿಂದುಳಿದ ವರ್ಗಗಳಿಗೆ 57% ಮೀಸಲಾತಿ ಹೆಚ್ಚಿಸಬೇಕೆಂದು ಹೇಳಿದೆ. ಜಾತಿಗಣತಿ ಸ್ವೀಕಾರ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:- ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್ ಕುಮಾರ್
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…