ಮೈಸೂರು

ಬಿಜೆಪಿ ನಾಯಕರು ಮೀಸಲಾತಿ ವಿರೋಧಿಗಳು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah)

ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ.

ನಂಜನಗೂಡಿನಲ್ಲಿ ಇಂದು (ಏ.16) ಮಾತನಾಡಿದ ಅವರು, ಜಾತಿಗಣತಿಯಿಂದ ಹಿಂದುಳಿದ ವರ್ಗಕ್ಕೆ ಎಲ್ಲಿ ಹೆಚ್ಚು ಮೀಸಲಾತಿ ಸಿಗುತ್ತದಯೋ ಎಂದು ಬಿಜೆಪಿ ನಾಯಕರಿಗೆ ಭಯವಿದೆ. ಅದಕ್ಕಾಗಿ ಜಾತಿಗಣತಿಯನ್ನು ವಿರೋಧ ಮಾಡುತ್ತಿದ್ದಾರೆ. ಆದರೆ ನಾವು ಅವರ ವಿರೋಧಕ್ಕೆ ಮಣೆ ಹಾಕದೆ ವರದಿ ಜಾರಿಗೆ ಬದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ:- ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ: ಸಿಎಂ ಸಿದ್ದರಾಮಯ್ಯ

ಈಗಾಗಲೇ ಜಾತಿಗಣತಿಯನ್ನು ಸಂಪುಟದ ಮುಂದೆ ಮಂಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನಾಳೆ ಸಚಿವರ ಜೊತೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಮಾಡಲಿದ್ದಾರೆ ಎಂದರು.

ಹೆಚ್ಚಿನ ಮಾಹಿತಿ:- ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕಾಂತರಾಜು ಆಯೋಗ ಹಿಂದುಳಿದ ವರ್ಗಗಳಿಗೆ 57% ಮೀಸಲಾತಿ ಹೆಚ್ಚಿಸಬೇಕೆಂದು ಹೇಳಿದೆ. ಜಾತಿಗಣತಿ ಸ್ವೀಕಾರ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:- ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್ ಕುಮಾರ್

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago