ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಯಾರು ಮಾತನಾಡುತ್ತಿಲ್ಲ. ಆದರೆ ಅದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ ಇದಕ್ಕೆಲ್ಲಾ ವಿರಾಮ ಹಾಕಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ. ಅಲ್ಲದೇ ಸಿಎಂ ಬದಲಾಬಣೆ ಬಗ್ಗೆ ಯಾವ ನಾಯಕರು ಹೇಳಿಕೆಗಳನ್ನು ನೀಡುತ್ತಿಲ್ಲ. ಆದರೆ ಮಾಧ್ಯಮಗಳಲ್ಲಿ ಮಾತ್ರ ಸಿಎಂ ಬದಲಾವಣೆ ವಿಚಾರ ಬರುತ್ತಿದೆ . ಇಂತಹ ವಿಚಾರಗಳಿಗೆ ವಿರಾಮ ಹಾಕಬೇಕು ಎಂದು ಹೇಳಿದರು.
ಇನ್ನು ರಾಜಕೀಯದ ವಿಚಾರಗಳನ್ನು ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಅದೆಲ್ಲಾ ಇದೆಲ್ಲಾ ವರಿಷ್ಟರಿಗೆ ಬಿಟ್ಟ ವಿಚಾರ ಎಂದರು.
ಇದೇ ಸಂದರ್ಭದಲ್ಲಿ ಗ್ಯಾರೆಂಟಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಹಣ ಯೋಜನೆಗೆ ಬಗ್ಗೆ ಮಾತನಾಡಿದ ಅವರು, ಎಷ್ಟು ತಿಂಗಳಿಂದ ಬಂದಿಲ್ಲ ಎಲ್ಲವನ್ನೂ ಸೇರಿಸಿ ಒಟ್ಟಿಗೆ ಸರ್ಕಾರ ಹಾಕುತ್ತದೆ. ಈ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.





