ಮೈಸೂರು

ರಾಜ್ಯ ರಜಕಾರಣದಲ್ಲಿ ಸದ್ದು ಮಾಡಿದ ಯತೀಂದ್ರ ಫೋನ್‌ ಕಾಲ್

ಮೈಸೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಜೋರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಜೊತೆ ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿದೆ.

ಮೈಸೂರಿನ ಚಟ್ನಳ್ಳಿ ಪಾಳ್ಯ ಗ್ರಾಮದಲ್ಲಿ ನೆನ್ನೆ ನಡೆದ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸುವ ವೇಳೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಜೊತೆ ನಡೆಸಿರುವ ಫೋನ್‌ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ತಂದೆಯೋಟ್ಟಿಗೆ ಫೋನ್‌ ನಲ್ಲಿ ಮಾತನಾಡಿರುವ ಯತೀಂದ್ರ ಆರಂಭದಲ್ಲಿ ಅಪ್ಪ ಹೇಳಿ ಎಂದು ಮಾತು ಶುರು ಮಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರು ವಿವೇಕಾನಂದ ಯಾರು ಎಂದು ಪ್ರಶ್ನಿಸಿದ್ದಾರೆ. ಆಗ ಯತೀಂದ್ರ, ಮಹದೇವ್‌ ಅವರಿಗೆ ಫೋನ್‌ ನೀಡುವಂತೆ ತಮ್ಮ ತಂದೆಗೆ ಹೇಳುತ್ತಾರೆ. ಅವರಿಗೆ ಫೋನ್‌ ಕೊಟ್ಟ ತಕ್ಷಣ ಅವರನ್ನು ತರಾಟೆಗೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದನ್ನು ಬಿಟ್ಟು ಬೇರೆ ಯಾವುದೆಂದು ಪ್ರಶ್ನಿಸಿದ್ದಾರೆ. ನನಗೆ ಗೊತ್ತಿಲ್ಲ ನಾನು ಕೊಟ್ಟಿರುವ ನಾಲ್ಕೈದು ಮಾತ್ರ ಮಾಡಿ ಎಂದು ಸೂಚನೆ ನೀಡಿದ್ದಾರೆ.

ಸಧ್ಯ ಯತೀಂದ್ರ ಅವರ ಈ ಫೋನ್‌ ಸಂಭಾಷಣೆಯ ವಿಡಿಯೋ ಭಾರೀ ವೈರಲ್‌ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

lokesh

Recent Posts

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

15 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

43 mins ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

3 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

3 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

3 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

3 hours ago