ಮೈಸೂರು: ಇಂದು (ಮೇ 11) ನಗರದಲ್ಲಿ ನಡೆದ ʼಸ್ವಾಭಿಮಾನಿಗೆ ಸಾವಿರ ನುಡಿ ನಮನʼ ವಿ.ಶ್ರೀನಿವಾಸ್ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮ ಕಾಂಗ್ರೆಸ್-ಬಿಜೆಪಿ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು.
ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ ಹಾಗೂ ಸಾಂಸ್ಕೃತಿಕ ಟ್ರಸ್ಟ್, ಸಮಾನತೆ ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ ಸಹಯೋಗದಲ್ಲಿ ಮಾನಂದವಾಡಿ ರಸ್ತೆಯ ರೇಷ್ಮೆ ಕಾರ್ಖಾನೆ ಎದುರು ಆಯೋಜಿಸಿದ್ದ ʻಸ್ವಾಭಿಮಾನಿಗೆ ಸಾವಿರ ನುಡಿನಮನ-ವಿ.ಶ್ರೀನಿವಾಸ್ ಪ್ರಸಾದ್ ಶ್ರದ್ಧಾಂಜಲಿʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವೇದಿಕೆ ಹಂಚಿಕೊಂಡರು.
ಉಭಯ ನಾಯಕರು ಕುಶಲೋಪರಿ ವಿಚಾರಿಸಿ, ಅಕ್ಕಪಕ್ಕದ ಕುರ್ಚಿಯಲ್ಲಿ ಕುಳಿತಿದ್ದರು. ಈ ವೇಳೆ ಬಿ.ಎಸ್ ಯಡಿಯೂರಪ್ಪ ಅವರು ಸಿ.ಎಂ ಸಿದ್ದರಾಮಯ್ಯ ಅವರಿಗೆ ಒಂದು ಚೀಟಿಯನ್ನು ನೀಡಿದರು. ಆ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್ ಜೇಬಿಗೆ ಇಟ್ಟುಕೊಂಡರು. ಬಳಿಕ ಚೀಟಿಯಲ್ಲಿರುವ ವಿಚಾರದ ಬಗ್ಗೆ ಕೆಲಕಾಲ ಪರಸ್ಪರ ಮಾತುಕತೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ. ಡಾ.ಹೆಚ್.ಸಿ ಮಹದೇವಪ್ಪ, ಸಂಸದ ಪ್ರತಾಪ ಸಿಂಹ, ಶಾಸಕರಾದ ಟಿ.ಎಸ್. ಶ್ರೀವತ್ಸ, ಎ.ಆರ್ ಕೃಷ್ಣಮೂರ್ತಿ, ದರ್ಶನ ಧ್ರುವರಾರಾಯಣ, ಶ್ರೀನಿವಾಸ ಪ್ರಸಾದ್ ಪತ್ನಿ, ಭಾಗ್ಯಲಕ್ಷ್ಮಿ, ಸಿ.ಎಸ್ ದ್ವಾರಕನಾಥ್, ಪ್ರಸಾದ್ ಅವರ ಮೂವರು ಪುತ್ರಿಯರು ಹಾಗೂ ಅಳಿಯಂದಿರು ಇದ್ದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…