Mysore
31
overcast clouds

Social Media

ಶುಕ್ರವಾರ, 08 ಮೇ 2026
Light
Dark

ಪಾಲಿಕೆ ನೌಕರರ ಮುಷ್ಕರಕ್ಕೆ ಯಡಿಯೂರಪ್ಪ ಬೆಂಬಲ

Yediyurappa Extends Support to Municipal Workers’ Strike

ಮೈಸೂರು : ನಗರ ಪಾಲಿಕೆ ನೌಕರರ ನ್ಯಾಯಯುತ ಬೇಡಿಕೆಯನ್ನು ಕೂಡಲೇ ರಾಜ್ಯ ಸರ್ಕಾರ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಆಷಾಡ ಶುಕ್ರವಾರದ ಪ್ರಯುಕ್ತ ಕುಟುಂಬಸ್ಥರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ ಪಡೆದು ನಂತರ ಮೈಸೂರು ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ ನಗರ ಪಾಲಿಕೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡು, ನೌಕರರ ವಿವಿಧ ಬೇಡಿಕೆಗಳ ಮನವಿ ಸ್ವೀಕರಿಸಿ ನಂತರ ಮಾತನಾಡಿದ ಅವರು, ರಾಜ್ಯಾಧ್ಯಂತ ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದರು ಸರ್ಕಾರ ಮಾತ್ರ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮ ತವರು ನಗರದಲ್ಲೇ ನೌಕರರು ಪ್ರತಿಭಟನೆ ನಡೆಸುತ್ತಿದ್ದರು ಕುಂಭ ಕರ್ಣ ನಿದ್ರೆಗೆ ಜಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಮುಂದಿನ ದಿನಗಳಲ್ಲಾದರೂ ಇವರ ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು, ನೌಕರರ ನ್ಯಾಯಯುತ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.

ಇದೆ ವೇಳೆ ಸಂಸದರಾದ ವಿ.ವೈ ರಾಘವೇಂದ್ರ, ಶಾಸಕ ಟಿ.ಎಸ್ ಶ್ರೀವತ್ಸ, ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಸುಬ್ಬಣ್ಣ, ಮಾಜಿ ಮೇಯರ್ ಶಿವಕುಮಾರ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

Tags:
error: Content is protected !!