ಮೈಸೂರು

ಜೂನ್ 21ರಂದು ಅರಮನೆ ಆವರಣದಲ್ಲಿ ಯೋಗ ದಿನಾಚರಣೆ: ಯದುವೀರ್ ಕೃಷ್ಣದತ್ತ ಒಡೆಯರ್

ಮೈಸೂರು: ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21 ರಂದು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಾನ್ಯ ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾನು ಪ್ರತಿ ವರ್ಷ ಯೋಗ ದಿನಾಚರಣೆಯಲ್ಲಿ ಭಾಗವಹಿಸುತ್ತೇನೆ. ಸರ್ಕಾರದಿಂದ ನೀಡಿರುವ 1 ಲಕ್ಷ ಅನುದಾನದ ಜೊತೆಗೆ ವಿವಿಧ ದಾನಿಗಳಿಂದ ಅನುದಾನವನ್ನು ಪಡೆದು ಆ ಅನುದಾನವನ್ನು ಬಳಕೆ ಮಾಡಿ ಉತ್ತಮವಾಗಿ ಯೋಗ ದಿನಾಚರಣೆ ಆಯೋಜನೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಮಾತನಾಡಿ, ಮೈಸೂರಿನ ಯೋಗವು ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದೆ. ರಾಜ್ಯ ಸರ್ಕಾರದಿಂದ ಜಿಲ್ಲಾ ಮಟ್ಟಕ್ಕೆ ಯೋಗ ದಿನಾಚರಣೆ ಆಯೋಜನೆಗೆ 1 ಲಕ್ಷ ಅನುದಾನ ಬರುತ್ತದೆ. ಯೋಗವನ್ನು ಅರಮನೆಯ ಮುಂಭಾಗದಲ್ಲಿ ಆಯೋಜನೆ ಮಾಡಲಾಗುವುದು. ಅಂದು ಬೆಳಿಗ್ಗೆ 7 ಗಂಟೆಗೆ ಯೋಗ ಪ್ರಾರಂಭವಾಗುವುದು. ಕನಿಷ್ಠ 10 ಸಾವಿರ ಯೋಗಪಟುಗಳು ಭಾಗವಹಿಸುವರು ಎಂದರು.

ಸರ್ಕಾರದ ಶಿಷ್ಟಾಚಾರ ಪಾಲನೆ ಮಾಡಿ ಯೋಗ ದಿನಾಚರಣೆಯನ್ನು ಆಯೋಜನೆ ಮಾಡಲಾಗುವುದು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಗ್ಗೆ 6.30 ಕ್ಕೆ ಪ್ರಾರಂಭವಾಗುವುದು. ಅಚ್ಚುಕಟ್ಟಾಗಿ ಯೋಗ ದಿನಾಚರಣೆ ಆಯೋಜನೆಗೆ ವಿವಿಧ ಇಲಾಖೆಗಳಿಗೆ ನಿಯೋಜಿಸುವ ಕಾರ್ಯಗಳನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

8 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

9 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

10 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

10 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

10 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

13 hours ago