ಮೈಸೂರು

ಯೋಗ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ : ಪ್ರತಾಪ್ ಸಿಂಹ

ಮೈಸೂರು : ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಮೈಸೂರು ಕೊಡಗು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಮೈಸೂರು ಅರಮನೆ ಮಂಡಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಗೂ ವಿವಿಧ ಯೋಗ ನಿರತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2015 ರಲ್ಲಿ ಮಾನ್ಯ ಪ್ರಧಾನ ಮಂತ್ರಿಗಳು ಜೂನ್ 21 ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡಬೇಕು ಎಂದು ವಿಶ್ವ ಸಂಸ್ಥೆಯಲ್ಲಿ ಮಂಡಿಸಿದರು.

ಬಹುತೇಕ ರಾಷ್ಟ್ರಗಳು ಒಪ್ಪಿಗೆ ಸೂಚಿಸಿದವು. ಅಂದಿನಿಂದ ವಿಶ್ವ ಯೋಗ ದಿನಾಚರಣೆ ಮಾಡಲಾಗುತ್ತಿದೆ. ಮೈಸೂರನ್ನು ಸಿಟಿ ಆಫ್ ಯೋಗ ಎಂದು ಕರೆಯಲಾಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಮಾತನಾಡಿ ನಾವು ಚಿಕ್ಕವರಿದ್ದಾಗ ಡಾ. ರಾಜಕುಮಾರ್ ಅವರ ಯೋಗವನ್ನು ನೋಡುತ್ತಿದ್ದೆ. ಯೋಗ ಮಾಡುವುದರಿಂದ ದೇಹಕ್ಕೆ ತೇಜಸ್ಸನ್ನು ನೀಡುತ್ತದೆ. ಯೋಗ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ದಿನವಿಡೀ ಉಲ್ಲಾಸದಿಂದ ಇರಲು ಸಹಕಾರಿಯಾಗುತ್ತದೆ. ದೇಶ ಕಾಯುವ ಸೈನಿಕರಿಗೂ ಯೋಗ ಮಾಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಮಾತನಾಡಿ ಯೋಗ ವಿಶ್ವದಲ್ಲಿ ಪ್ರಸಿದ್ದಿ ಪಡೆದಿದೆ. ಯೋಗದ ಮಹತ್ವ ವಿಶ್ವಕ್ಕೆ ತಿಳಿದಿದೆ. ಮೈಸೂರು ಯೋಗಕ್ಕೆ ಪ್ರಸಿದ್ದಿ ಪಡೆದಿದೆ. ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಿತ್ತು. ಯೋಗ ಆರೋಗ್ಯಕ್ಕೆ ಉತ್ತಮ ಪ್ರಯೋಜನ ನೀಡುತ್ತದೆ. ಎಲ್ಲಾ ಯೋಗ ಸಂಘ ಸಂಸ್ಥೆಗಳು ಯೋಗ ಬೆಳೆಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಮತ್ತೊಮ್ಮೆ ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಬೇಕು ಎಂದರು.

ಶ್ರೀ ಸೋಮೇಶ್ವರ ಸ್ವಾಮೀಜಿ ಅವರು ಮಾತನಾಡಿ ಯೋಗ ಮನಸ್ಸನ್ನು ಹಿಡಿತದಲ್ಲಿ ಇಡುತ್ತಡೆ. ವಿಶ್ವದ 186 ದೇಶಗಳಲ್ಲಿ ಯೋಗ ಸ್ಥಾನ ಪಡೆದಿದೆ. ಸನಾತನ ಋಷಿಗಳು ಯೋಗವನ್ನು ನೀಡಿದರು ಎಂದು ಮಾಹಿತಿ ನೀಡಿದರು.

ಶಂಕ ನಾದವನ್ನು ಮೊಳಗಿಸುವ ಮೂಲಕ ಯೋಗವನ್ನು ಪ್ರಾರಂಭಿಸಲಾಯಿತು. ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು ಭಾಗವಹಿಸಿ ಯೋಗವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮುಖಂಡರಾದ ತನ್ವೀರ್ ಪಾಷಾ ಸೇರಿದಂತೆ ವಿವಿಧ ಧರ್ಮಗುರುಗಳು ಹಾಗೂ ಯೋಗಪಟುಗಳು ಭಾಗವಹಿಸಿದ್ದರು.

lokesh

Recent Posts

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

44 seconds ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

43 mins ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

53 mins ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

60 mins ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

2 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

3 hours ago